AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಜಾಲ ರೌಡಿಶೀಟರ್ 'ಕಿಂಗ್ ಮೇಕರ್ ದಾಸ'ನ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭಾಗಿ

ಚಿಕ್ಕಜಾಲ ರೌಡಿಶೀಟರ್ ‘ಕಿಂಗ್ ಮೇಕರ್ ದಾಸ’ನ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭಾಗಿ

ನವೀನ್ ಕುಮಾರ್ ಟಿ.
| Edited By: |

Updated on: Jul 13, 2026 | 12:57 PM

Share

ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕುಖ್ಯಾತ ರೌಡಿಶೀಟರ್ 'ಕಿಂಗ್ ಮೇಕರ್ ದಾಸ'ನ ಅದ್ಧೂರಿ ಹುಟ್ಟುಹಬ್ಬದಲ್ಲಿ ಭಾಗಿಯಾಗಿರುವುದು ಸದ್ದು ಮಾಡುತ್ತಿದೆ. ಆಲೂರು ಗ್ರಾಮದಲ್ಲಿ ನಡೆದ ಈ ಘಟನೆಯ ಫೋಟೋಗಳು ವೈರಲ್ ಆಗಿದ್ದು, ದಾಸ ಕೋಟಿಗಟ್ಟಲೆ ಭೂ ಕಬಳಿಕೆ ಹಾಗೂ ರಿಯಲ್ ಎಸ್ಟೇಟ್ ದಂಧೆಯಲ್ಲಿ ಸಕ್ರಿಯನಾಗಿದ್ದಾನೆ. ಕಳೆದ ಬಾರಿ ಇದೇ ರೌಡಿಶೀಟರ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರು ಅಮಾನತ್ತಾಗಿದ್ದರು. ಈ ಹೊಸ ವಿವಾದ ಮತ್ತಷ್ಟು ಸಂಚಲನ ಸೃಷ್ಟಿಸಿದೆ.

ಬೆಂಗಳೂರು, ಜು.13: ಯಲಹಂಕ ಕ್ಷೇತ್ರದ ಪ್ರಭಾವಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಕುಖ್ಯಾತ ರೌಡಿಶೀಟರ್ ಒಬ್ಬನ ಅದ್ಧೂರಿ ಹುಟ್ಟುಹಬ್ಬದ ಆಚರಣೆಯಲ್ಲಿ ಖುದ್ದಾಗಿ ಭಾಗಿಯಾಗಿ ಕೇಕ್ ತಿನ್ನಿಸಿರುವ ಫೋಟೋ ಹಾಗೂ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಯಲಹಂಕ ಕ್ಷೇತ್ರದ ಆಲೂರು ಗ್ರಾಮದಲ್ಲಿ ಈ ಅದ್ಧೂರಿ ಬರ್ತಡೇ ಪಾರ್ಟಿ ನಡೆದಿದ್ದು, ಭಾರೀ ಸಂಚಲನ ಮೂಡಿಸಿದೆ. ಚಿಕ್ಕಜಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ದಾಸ ಅಲಿಯಾಸ್ ‘ಕಿಂಗ್ ಮೇಕರ್ ದಾಸ’ ಎಂಬಾತನೇ ಈಗ ಶಾಸಕರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ಈ ರೌಡಿಶೀಟರ್ ದಾಸ ಯಲಹಂಕ, ನೆಲಮಂಗಲ ಹಾಗೂ ದಾಸರಹಳ್ಳಿ ಭಾಗಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂ ಕಬಳಿಕೆ ಮತ್ತು ರಿಯಲ್ ಎಸ್ಟೇಟ್ ದಂಧೆಗಳಲ್ಲಿ ಸಕ್ರಿಯನಾಗಿದ್ದಾನೆ ಎನ್ನಲಾಗಿದೆ. ಕಳೆದ ಬಾರಿ ಈತನ ಬರ್ತ್‌ಡೇ ಪಾರ್ಟಿಯಲ್ಲಿ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ನಾಗರಾಜ್ ಭಾಗಿಯಾಗಿದ್ದರು. ಒಬ್ಬ ರೌಡಿಶೀಟರ್ ಪಾರ್ಟಿಯಲ್ಲಿ ಪೊಲೀಸ್ ಅಧಿಕಾರಿಯೇ ಭಾಗಿಯಾಗಿದ್ದು ಭಾರಿ ವಿವಾದ ಸೃಷ್ಟಿಸಿತ್ತು. ಆ ಪ್ರಕರಣ ದೊಡ್ಡ ಸದ್ದು ಮಾಡಿದ ಬೆನ್ನಲ್ಲೇ ಇನ್ಸ್‌ಪೆಕ್ಟರ್ ನಾಗರಾಜ್ ಅವರನ್ನ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More