ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಖಡ್ಗ ನೀಡಿ ಸತ್ಕರಿಸಿದ ಎಸ್ಅರ್ ವಿಶ್ವನಾಥ್
ವೇದಿಕೆಯ ಬಲತುದಿಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಕೂತಿರುವುದನ್ನು ನೋಡಬಹುದು. ಕನ್ನಡಿಗರಿಗೆಲ್ಲ ಗೊತ್ತಿರುವಂತೆ ವಿಶ್ವನಾಥ್ ಮತ್ತು ಸುರೇಶ್ ಬೀಗರು. ವಿಶ್ವನಾಥ್ ಮಗಳನ್ನು ಸುರೇಶ್ ಮಗನಿಗೆ ಕೊಟ್ಟು ಮದುವೆ ಮಾಡಲಾಗಿದೆ. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ವಿಶ್ವನಾಥ್ ತಮ್ಮ ಬೀಗರಿಗೂ ಖಡ್ಗ ನೀಡಿ ಸನ್ಮಾನಿಸದರು. ಆ ಧೃಶ್ಯ ಈ ವಿಡಿಯೋದಲ್ಲಿಲ್ಲ.
ಬೆಂಗಳೂರು, ಮೇ 3: ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ (Dr BR Ambedkar) ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಮುಖ್ಯಮಂತ್ರಿಯವರನ್ನು ಶಾಲು ಹೊದಿಸಿ ಸನ್ಮಾನಿಸಿದರಲ್ಲದೆ ಖಡ್ಗವೊಂದನ್ನು ನೀಡಿ ಗೌರವಿಸಿದರು. ವೇದಿಕೆ ಮೇಲಿದ್ದ ಸಮಾಜ ಕಲ್ಯಾಣ ಖಾತೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೂ ವಿಶ್ವನಾಥ್ ಅವರು ಖಡ್ಗ ನೀಡಿ ಸನ್ಮಾನಿಸಿದರು.
ಇದನ್ನೂ ಓದಿ: ಕೇಂದ್ರ ಸರ್ಕಾರದ ಜನಗಣತಿ ಜೊತೆಗೆ ಜಾತಿಗಣತಿ ನಿರ್ಧಾರ ಸ್ವಾಗತಿಸುವೆ: ಸಿದ್ದರಾಮಯ್ಯ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos