ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

Updated on: Mar 17, 2026 | 3:40 PM

ಯಲಹಂಕ ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಮೂರ್ತಿ ಅವರು ಆತ್ಮಹತ್ಯೆ ಯತ್ನಿಸುತ್ತಿದ್ದ ಅಮೂಲ್ಯ ಜೀವವೊಂದನ್ನು ರಕ್ಷಿಸಿ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದಾರೆ. Namma 112 ಕರೆ ಸ್ವೀಕರಿಸಿ ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು, ರೈಲು ಬರುವ ಮುನ್ನವೇ ವ್ಯಕ್ತಿಯನ್ನು ಹಳಿಯಿಂದ ಪಾರು ಮಾಡಿದರು. ಕೇವಲ ರಕ್ಷಣೆ ಮಾತ್ರವಲ್ಲದೆ, ಸಂಕಷ್ಟಗಳಿಗೆ ಆತ್ಮಹತ್ಯೆ ಪರಿಹಾರವಲ್ಲ ಎಂದು ಮನವರಿಕೆ ಮಾಡಿ ಧೈರ್ಯ ತುಂಬಿ ಕುಟುಂಬಕ್ಕೆ ಒಪ್ಪಿಸಿದ್ದಾರೆ. ಇದು ಮಾನವೀಯತೆ ಮತ್ತು ಕರ್ತವ್ಯ ಪ್ರಜ್ಞೆಯ ಸಾಕ್ಷಿ.

ಬೆಂಗಳೂರು, ಮಾ.17: “ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ” ಎಂಬ ಮಾತನ್ನು ಕೇವಲ ಮಾತಾಗಿ ಉಳಿಸದೆ, ಪ್ರಾಯೋಗಿಕವಾಗಿ ಅಮೂಲ್ಯ ಜೀವವೊಂದನ್ನು ಉಳಿಸುವ ಮೂಲಕ ಯಲಹಂಕ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಮೂರ್ತಿ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈಶಾನ್ಯ ವಿಭಾಗದ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಮೇಲೆ ವ್ಯಕ್ತಿಯೊಬ್ಬರು ಮಲಗಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ ಎಂಬ ತುರ್ತು ಕರೆ ಪೊಲೀಸ್ ನಿಯಂತ್ರಣ ಕೊಠಡಿಗೆ (Namma 112) ಬಂದಿತ್ತು. ಈ ಮಾಹಿತಿಯನ್ನು ಸ್ವೀಕರಿಸಿದ ಕೂಡಲೇ ಗಸ್ತು ವಾಹನದಲ್ಲಿದ್ದ ಶ್ರೀ ಶ್ರೀಧರ್ ಮೂರ್ತಿ (HC-13669) ಅವರು ತಕ್ಷಣ ಸ್ಥಳಕ್ಕೆ ಧಾವಿಸಿದರು. ರೈಲು ಬರುವ ಮುನ್ನವೇ ಹಳಿಯ ಬಳಿಗೆ ತಲುಪಿದ ಶ್ರೀಧರ್ ಮೂರ್ತಿ ವ್ಯಕ್ತಿಯನ್ನು ಸುರಕ್ಷಿತವಾಗಿ ಅಲ್ಲಿಂದ ಪಾರು ಮಾಡಿದರು. ಕೇವಲ ರಕ್ಷಣೆ ಮಾಡುವುದಕ್ಕೆ ಸೀಮಿತವಾಗದ ಅವರು, ಆ ವ್ಯಕ್ತಿಯೊಂದಿಗೆ ಸಮಾಲೋಚನೆ ನಡೆಸಿದರು. ಜೀವನದಲ್ಲಿ ಎದುರಾಗುವ ಸಂಕಷ್ಟಗಳಿಗೆ ಆತ್ಮಹತ್ಯೆ ಅಂತಿಮ ನಿರ್ಧಾರವಲ್ಲ ಎಂದು ಮನವರಿಕೆ ಮಾಡಿಕೊಟ್ಟು, ಆತನಲ್ಲಿ ಧೈರ್ಯ ತುಂಬಿದರು.ಬಳಿಕ ವ್ಯಕ್ತಿಯ ಕುಟುಂಬದವರನ್ನು ಸಂಪರ್ಕಿಸಿ, ನಡೆದ ಘಟನೆಯ ಬಗ್ಗೆ ವಿವರಿಸಿ ಸುರಕ್ಷಿತವಾಗಿ ಕುಟುಂಬಸ್ಥರ ಒಪ್ಪಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More