ಯಲಬುರ್ಗಾ: ಹೊಸಳ್ಳಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಸಾವು, ಐವರಿಗೆ ಗಂಭೀರ ಗಾಯ
ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಖಾಸಗಿ ಬಸ್ ಯಲಬುರ್ಗಾ ತಾಲೂಕಿನ ಹೊಸಳ್ಳಿ ಬಳಿ ಬುಧವಾರ ಬೆಳಗ್ಗೆ ಪಲ್ಟಿಯಾಗಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಭೀಕರತೆಯನ್ನು ಸಾರುವ ವಿಡಿಯೋ ಇಲ್ಲಿದೆ ನೋಡಿ.
ಕೊಪ್ಪಳ, ಜನವರಿ 29: ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಬಳಿ ಸಂಭವಿಸಿದೆ. ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ವೈಭವ್ (9) ಮೃತಪಟ್ಟ ಬಾಲಕ. ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಖಾಸಗಿ ಬಸ್, ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಗಾಯಾಳುಗಳಿಗೆ ಯಲಬುರ್ಗಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ