AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೆಮೆನ್​ನಲ್ಲಿ ಇಸ್ರೇಲ್​ನಿಂದ ಮತ್ತೆ ವೈಮಾನಿಕ ದಾಳಿ, 35 ಮಂದಿ ಸಾವು, 130ಕ್ಕೂ ಅಧಿಕ ಜನರಿಗೆ ಗಾಯ

ಯೆಮೆನ್​ನಲ್ಲಿ ಇಸ್ರೇಲ್​ನಿಂದ ಮತ್ತೆ ವೈಮಾನಿಕ ದಾಳಿ, 35 ಮಂದಿ ಸಾವು, 130ಕ್ಕೂ ಅಧಿಕ ಜನರಿಗೆ ಗಾಯ

ನಯನಾ ರಾಜೀವ್
|

Updated on:Sep 11, 2025 | 9:02 AM

Share

ಯೆಮೆನ್​​ನಲ್ಲಿ ಇಸ್ರೇಲ್ ಮತ್ತೊಂದು ಸುತ್ತಿನ ವೈಮಾನಿಕ ದಾಳಿ ನಡೆಸಿದೆ. ಕನಿಷ್ಠ 35 ಮಂದಿ ಸಾವನ್ನಪ್ಪಿದ್ದು, 130ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.ಬಂಡುಕೋರರು ಇಸ್ರೇಲಿ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಿದ ಕೆಲವೇ ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.ಗಾಜಾ ನಗರದಲ್ಲಿ ಸುಮಾರು 1 ಮಿಲಿಯನ್ ಜನರು ಸ್ಥಳಾಂತರಗೊಳ್ಳಬೇಕೆಂದು ಇಸ್ರೇಲ್ ತನ್ನ ಕರೆಯನ್ನು ಪುನರುಚ್ಚರಿಸಿತು.

ಯೆಮನ್​, ಸೆಪ್ಟೆಂಬರ್ 11: ಯೆಮೆನ್​​ನಲ್ಲಿ ಇಸ್ರೇಲ್ ಮತ್ತೊಂದು ಸುತ್ತಿನ ವೈಮಾನಿಕ ದಾಳಿ ನಡೆಸಿದೆ. ಕನಿಷ್ಠ 35 ಮಂದಿ ಸಾವನ್ನಪ್ಪಿದ್ದು, 130ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.ಬಂಡುಕೋರರು ಇಸ್ರೇಲಿ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಿದ ಕೆಲವೇ ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.ಗಾಜಾ ನಗರದಲ್ಲಿ ಸುಮಾರು 1 ಮಿಲಿಯನ್ ಜನರು ಸ್ಥಳಾಂತರಗೊಳ್ಳಬೇಕೆಂದು ಇಸ್ರೇಲ್ ತನ್ನ ಕರೆಯನ್ನು ಪುನರುಚ್ಚರಿಸಿತು.

ರಾಜಧಾನಿ ಸನಾ ಸೇರಿದಂತೆ ಯೆಮೆನ್‌ನ ಹಲವಾರು ಭಾಗಗಳಲ್ಲಿ ಇಸ್ರೇಲ್ ಬುಧವಾರ ಹೌತಿ ಬಂಡುಕೋರರ ಮೇಲೆ ವಾಯುದಾಳಿ ನಡೆಸಿದೆ. ಕತಾರ್‌ನಲ್ಲಿ ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ನಂತರ ಇಸ್ರೇಲ್ ಈ ದಾಳಿ ನಡೆಸಿದೆ. ಯೆಮೆನ್ ಸರ್ಕಾರಿ ಅಧಿಕಾರಿಗಳ ಪ್ರಕಾರ, ದಾಳಿಯಲ್ಲಿ ಮಿಲಿಟರಿ ನೆಲೆಗಳು ಮತ್ತು ಇಂಧನ ಕೇಂದ್ರವನ್ನು ಗುರಿಯಾಗಿಸಲಾಗಿದೆ. ಇಸ್ರೇಲ್ ಯುದ್ಧ ವಿಮಾನಗಳ ಮೂಲಕ ಈ ದಾಳಿಯನ್ನು ನಡೆಸಿದೆ ಎಂದು ನಂಬಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Sep 11, 2025 09:01 AM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More