ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ! ಕೂದಲೆಳೆ ಅಂತರದಲ್ಲಿ ಚಾಲಕ ಪಾರು

Updated on: Jan 18, 2026 | 8:56 AM

ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಚಲಿಸುತ್ತಿದ್ದ ಕಾರೊಂದಕ್ಕೆ ಮಧ್ಯರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ಕಾರಿನ ಒಳಭಾಗದಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಕ್ಷಣ ಸ್ಪಂದಿಸಿ ಕಾರಿಗೆ ಹೊತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕಾರಿಗೆ ಬೆಂಕಿ ಹೊತ್ತಿಕೊಂಡ ಕಾರಣ ತಿಳಿದುಬಂದಿಲ್ಲ.

ಬೆಂಗಳೂರು, ಜನವರಿ 18: ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಚಲಿಸುತ್ತಿದ್ದ ಕಾರೊಂದಕ್ಕೆ ಮಧ್ಯರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ಕಾರಿನ ಒಳಭಾಗದಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಕ್ಷಣ ಸ್ಪಂದಿಸಿ ಕಾರಿಗೆ ಹೊತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕಾರಿಗೆ ಬೆಂಕಿ ಹೊತ್ತಿಕೊಂಡ ಕಾರಣ ತಿಳಿದುಬಂದಿಲ್ಲ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.