ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ, ಕಳೆದೊಂದು ತಿಂಗಳಲ್ಲಿ ಹೃದಯಾಘಾತದಿಂದ 16ನೇ ದುರ್ಮರಣ

ಅರುಣ್​ ಕುಮಾರ್​ ಬೆಳ್ಳಿ

Updated on: Jun 28, 2025 | 12:57 PM

ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೊಳಗಾಗಿ ಸಾಯುತ್ತಿರರುವವರಲ್ಲಿ ಗೋವಿಂದ 16ನೇಯವರು. ಜಿಲ್ಲಾ ಉಸ್ತುವಾರಿ ಸಚಿವರು, ವೈದ್ಯಾಧಿಕಾರಿಗಳು ಮತ್ತು ಸಂಬಂಧಪಟ್ಟವರೆಲ್ಲ ಸೇರಿ ಕಾರಣ ಕಂಡುಹಿಡಿಯಬೇಕು ಎಂದು ಗೋವಿಂದ ಸ್ನೇಹಿತರು ಹೇಳುತ್ತಾರೆ. ಉಸ್ತುವಾರಿ ಸಚಿವರು ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ, ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಹೇಳಿಕೆ ನೀಡೋದ್ರಲ್ಲಿ ಮಗ್ನರಾಗಿದ್ದಾರೆ.

ಹಾಸನ, ಜೂನ್ 28: ಹಾಸನ ಜಿಲ್ಲೆಯಲ್ಲಿ ಚಿಕ್ಕ ವಯಸ್ಸಿನ ಜನ ಹೃದಯಾಘಾತಕ್ಕೊಳಗಾಗಿ ಸಾಯುತ್ತಿರುವುದು ಒಂದು ದೊಡ್ಡ ಮಿಸ್ಟರಿಯಾಗಿ ಪರಿಣಮಿಸಿದೆ. ಇಂದು ಬೆಳಗ್ಗೆ ಸುಮಾರು 7 ಗಂಟೆಗೆ 37-ವರ್ಷ ವಯಸ್ಸಿನ ಆಟೋ ಚಾಲಕ ಗೋವಿಂದ (Govind, autorickshaw driver) ಎನ್ನುವವರು ಹಾರ್ಟ್ ಅಟ್ಯಾಕ್​ನಿಂದ ಸಾವನ್ನಪ್ಪಿದ್ದಾರೆ. ಆಟೋ ಓಡಿಸುವಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಮತ್ತು ವಾಹನವನ್ನು ಓಡಿಸಿಕೊಂಡೇ ಜಿಲ್ಲಾಸ್ಪತ್ರೆವರೆಗೆ ಹೋಗಿದ್ದಾರೆ. ಅವರನ್ನು ದಾಖಲಿಸಿಕೊಲ್ಳುವಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿದೆ. ಅವರ ಸ್ನೇಹಿತರು ಹೇಳುವ ಪ್ರಕಾರ ಗೋವಿಂದ್​ಗೆ ಹೇಳಿಕೊಳ್ಳುವಂಥ ದುರಭ್ಯಾಸಗಳು ಇರಲಿಲ್ಲ, ವಾರದಲ್ಲಿ 2-3 ಸಲ ಮದ್ಯ ಸೇವಿಸುತ್ತಿದ್ದರಂತೆ, ಸಿಗರೇಟು ಸೇದುವ ಗುಟ್ಕಾ ಜಗಿಯುವ ಅಭ್ಯಾಸ ಅವರಿಗೆ ಇರಲಿಲ್ಲ.

ಇದನ್ನೂ ಓದಿ:  ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಸ್ಫೋಟಕ ಕಾರಣ ಬಿಚ್ಚಿಟ್ಟ ಡಿಹೆಚ್​ಓ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.