ಚಳ್ಳಕೆರೆ ಬಳಿ ಇನ್ನೊಂದು ರಸ್ತೆ ಅಪಘಾತ, ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದು ಕೆಎಸ್ಸಾರ್ಟಿಸಿ ಬಸ್ ಪಲ್ಟಿ, ಯಾವುದೇ ಪ್ರಾಣಾಪಾಯವಿಲ್ಲ
ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸನ್ನು ಮದುವೆ ಕಲಬುರಗಿಯಲ್ಲಿ ನಡೆದ ಮದುವೆಯೊಂದರಲ್ಲಿ ಭಾಗವಹಿಸಲು ಮಾಗಡಿಯ ಕುಟುಣಬವೊಂದು ಬುಕ್ ಮಾಡಿತ್ತು ಮತ್ತು ಮದುವೆ ಮುಗಿಸಿಕೊಂಡು ವಾಪಸ್ಸು ಬರುವಾಗ ಅಪಘಾತ ಜರುಗಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ (Challakere) ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ (national highway) ಇಂದು ಮತ್ತೊಂದು ಅಪಘಾತ ಸಂಭವಿಸಿದೆ. ಕಲಬುರಗಿಯಿಂದ (Kalaburagi) ಮಾಗಡಿಗೆ ಬರುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಚಳ್ಳಕೆರೆ ಹತ್ತಿರದ ಚಿಕ್ಕಹಳ್ಳಿ ಬಳಿ ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಉರುಳಿ ಬಿದ್ದಿದೆ. ಬಸ್ಸು ಪಲ್ಟಿಯಾಗಿರುವುದನ್ನು ಮತ್ತು ಇಟ್ಟಿಗೆಗಳು ಒಡೆದು ಚೂರುಚೂರಾಗಿ ರಾಷ್ಟ್ರೀಯ ಹೆದ್ದಾರಿ 150ಎ ಮೇಲೆ ಬಿದ್ದಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅದರೆ, ಬಸ್ಸಿನಲ್ಲಿದ್ದ ಜನರ ಪೈಕಿ 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಗಾಯಾಳುಗಳನ್ನು ಚಳ್ಳಕೆರೆ ತಾಲ್ಲೂಕಿನ ಅಸ್ಪತ್ರೆಗೆ ಸೇರಿಸಲಾಗಿದೆ. ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸನ್ನು ಮದುವೆ ಕಲಬುರಗಿಯಲ್ಲಿ ನಡೆದ ಮದುವೆಯೊಂದರಲ್ಲಿ ಭಾಗವಹಿಸಲು ಮಾಗಡಿಯ ಕುಟುಣಬವೊಂದು ಬುಕ್ ಮಾಡಿತ್ತು ಮತ್ತು ಮದುವೆ ಮುಗಿಸಿಕೊಂಡು ವಾಪಸ್ಸು ಬರುವಾಗ ಅಪಘಾತ ಜರುಗಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ