Yet another plane crash in Karnataka: ಎರಡು ದಿನಗಳಲ್ಲಿ ಎರಡನೇ ದುರಂತ, ಚಾಮರಾಜನಗರದಲ್ಲಿ ನೆಲಕ್ಕಪ್ಪಳಿಸಿ ಚೂರುಚೂರಾದ ಲಘು ತರಬೇತಿ ವಿಮಾನ!

ಅರುಣ್​ ಕುಮಾರ್​ ಬೆಳ್ಳಿ

Updated on: Jun 01, 2023 | 2:07 PM

ಎರಡು ದಿನಗಳ ಹಿಂದಷ್ಟೇ ಬೆಳಗಾವಿ ಬಳಿ ತರಬೇತಿ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ಪೈಲಟ್ ಅದನ್ನು ತುರ್ತು ಭೂ ಸ್ಪರ್ಶ ಮಾಡಿಸಿದ್ದರು.

ಚಾಮರಾಜನಗರ: ತರಬೇತಿಗೆ ಬಳಸುವ ಕಿರಣ್ ಲಘು ವಿಮಾನವೊಂದು (Kiran Aircraft) ತರಬೇತಿಯ ಸಮಯದಲ್ಲಿ (training sorie) ನೆಲ್ಲಕ್ಕಪ್ಪಳಿಸಿದ ದುರ್ಘಟನೆ ಇಂದು ಮಧ್ಯಾಹ್ನ 12.0 ಗಂಟೆಗೆ ಜಿಲ್ಲೆಯ ಕೆ ಮೋಕಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಜೆಟ್ ವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆಯೇ ಪ್ಯಾರಾಚೂಟ್ ಗಳೊಂದಿಗೆ (parachute) ಹೊರ ಜಿಗಿದು ಪ್ರಾಣವುಳಿಸಿಕೊಂಡಿದ್ದಾರೆ. ನೆಲಕ್ಕಪ್ಪಳಿಸಿದ ವಿಮಾನ ಚೂರುಚೂರಾಗಿ ಒಡೆದು ಬೆಂಕಿ ಹೊತ್ತಿಕೊಂಡು ಉರಿದಿದೆ. ಕೇವಲ ಎರಡು ದಿನಗಳ ಹಿಂದಷ್ಟೇ ಬೆಳಗಾವಿ ಬಳಿ ತರಬೇತಿ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ಪೈಲಟ್ ಅದನ್ನು ತುರ್ತು ಭೂ ಸ್ಪರ್ಶ ಮಾಡಿಸಿದ್ದರು. ಪೈಲಟ್ ಕಾಲಿಗೆ ಮಾತ್ರ ಗಾಯವಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.