ಯೋಗರಾಜ್​ ಭಟ್​ ನಿರ್ದೇಶನದ ‘ಗರಡಿ’ ಸಿನಿಮಾ ಸುದ್ದಿಗೋಷ್ಠಿ: ಲೈವ್​ ನೋಡಿ

Updated on: Oct 16, 2023 | 3:18 PM

Garadi Press Meet: ‘ಗರಡಿ’ ಸಿನಿಮಾದ ರಿಲೀಸ್​ ದಿನಾಂಕ ಹತ್ತಿರ ಆಗುತ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಗುತ್ತಿದ್ದು, ಆ ಪ್ರಯುಕ್ತ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ. ಇದರಲ್ಲಿ ಚಿತ್ರತಂಡ ಭಾಗಿ ಆಗಿದೆ. ‘ಗರಡಿ’ ಸಿನಿಮಾದ ಪ್ರೆಸ್​ ಮೀಟ್​ ಲೈವ್​ ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ..

ಯೋಗರಾಜ್​ ಭಟ್​ (Yogaraj Bhat) ನಿರ್ದೇಶನದ ‘ಗರಡಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದಲ್ಲಿ ಯಶಸ್​ ಸೂರ್ಯ, ಬಿ.ಸಿ. ಪಾಟೀಲ್​, ಸಾಯಿ ಕುಮಾರ್​, ಸೋನಲ್​ ಮಾಂತೆರೂ, ನಿಶ್ವಿಕಾ ನಾಯ್ಡು ಮುಂತಾದವರು ನಟಿಸಿದ್ದಾರೆ. ನಟ ದರ್ಶನ್​ (Darshan) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇಂದು (ಅಕ್ಟೋಬರ್​ 16) ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ಪ್ರಯುಕ್ತ ಬೆಂಗಳೂರಿನಲ್ಲಿ ಚಿತ್ರತಂಡ ಸುದ್ದಿಗೋಷ್ಠಿ ನಡೆಸುತ್ತಿದೆ. ಇದರಲ್ಲಿ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಭಾಗಿ ಆಗಿದ್ದಾರೆ. ‘ಗರಡಿ’ ಸಿನಿಮಾದ ಪ್ರೆಸ್​ ಮೀಟ್​ ಲೈವ್​ (Garadi Movie Press Meet) ವಿಡಿಯೋ ಇಲ್ಲಿದೆ..

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More