ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

Updated on: Dec 18, 2025 | 10:30 PM

‘ಲ್ಯಾಂಡ್ ಲಾರ್ಡ್’ ಚಿತ್ರದ ‘ನಿಂಗವ್ವ ನಿಂಗವ್ವ..’ ಸಾಂಗ್ ರಿಲೀಸ್ ಆಗಿದೆ. ಈ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಕಂಠದಲ್ಲಿ ಸಾಂಗ್ ಮೂಡಿಬಂದಿದೆ. ಹಾಡಿನ ರಿಲೀಸ್ ವೇಳೆ ಯೋಗರಾಜ್ ಭಟ್ ಅವರು ನೇರವಾಗಿ ಮಾತನಾಡಿದರು. ಯಾಕೆ ಈ ರೀತಿ ಮಾತಾಡಿದರು ಎಂಬುದಕ್ಕೆ ಈ ವಿಡಿಯೋದಲ್ಲಿ ಉತ್ತರ.

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್ ಲಾರ್ಡ್’ (Landlord) ಸಿನಿಮಾದ ‘ನಿಂಗವ್ವ ನಿಂಗವ್ವ..’ ಹಾಡು ರಿಲೀಸ್ ಆಗಿದೆ. ಈ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಪ್ರೇಮ್, ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ತರುಣ್ ಸುಧೀರ್, ಸೋನಲ್ ಮೊಂತೆರೋ ಭಾಗಿ ಆಗಿದ್ದರು. ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಯೋಗರಾಜ್ ಭಟ್ (Yogaraj Bhat) ಅವರು ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಕಂಠದಲ್ಲಿ ಹಾಡು ಮೂಡಿಬಂದಿದೆ. ಸಾಂಗ್ ರಿಲೀಸ್ ವೇಳೆ ಯೋಗರಾಜ್ ಭಟ್ ಅವರು ನೇರವಾಗಿ ಮಾತನಾಡಿದರು. ‘ನಾನು ಪಕ್ಕಾ ಲೋಫರ್. ಆದ್ರೆ ವಿಜಿ ನನ್ನ ಅಪ್ಪ ಇದ್ದಂಗೆ’ ಎಂದು ಅವರು ಹೇಳಿದರು. ಅವರು ಯಾಕೆ ಈ ರೀತಿ ಮಾತನಾಡಿದರು ಎಂಬುದಕ್ಕೆ ಈ ವಿಡಿಯೋದಲ್ಲಿ ಉತ್ತರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More