ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್

Updated on: Nov 29, 2023 | 10:22 PM

Pooja Gandhi Marriage: ನಟಿ ಪೂಜಾ ಗಾಂಧಿ ಉದ್ಯಮಿ ವಿಜಯ್ ಘೋರ್ಪಡೆ ಅವರೊಟ್ಟಿಗೆ ವಿವಾಹವಾಗಿದ್ದಾರೆ. ಮದುವೆಗೆ ಆಗಮಿಸಿದ್ದ ಯೋಗರಾಜ್ ಭಟ್ಟರು ಪೂಜಾ ಗಾಂಧಿಯನ್ನು ಮೊದಲ ಬಾರಿಗೆ ನೋಡಿದ್ದಾಗ ಹೇಳಿದ್ದ ಜೋಕ್ ಒಂದನ್ನು ನೆನಪು ಮಾಡಿಕೊಂಡಿದ್ದಾರೆ. ಏನದು ಜೋಕ್?

ನಟಿ ಪೂಜಾ ಗಾಂಧಿ (Pooja Gandhi) ಇಂದು (ನವೆಂಬರ್ 29) ಯಲಹಂಕದಲ್ಲಿ ಉದ್ಯಮಿ ವಿಜಯ್ ಘೋರ್ಪಡೆ ಅವರೊಟ್ಟಿಗೆ ಮಂತ್ರ ಮಾಂಗಲ್ಯ ವಿಧಾನದಲ್ಲಿ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ಕೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಆಗಮಿಸಿದ್ದರು. ಪಂಜಾಬ್ ಮೂಲದ ನಟಿ ಪೂಜಾ ಗಾಂಧಿಯನ್ನು ‘ಮುಂಗಾರು ಮಳೆ’ ಸಿನಿಮಾದ ಮೂಲಕ ಕನ್ನಡಕ್ಕೆ ಪರಿಚಯಿಸಿದ ನಿರ್ದೇಶಕ ಯೋಗರಾಜ್ ಭಟ್ಟರು ಸಹ ವಿವಾಹಕ್ಕೆ ಆಗಮಿಸಿದ್ದರು. ‘ಮುಂಗಾರು ಮಳೆ’ ಸಿನಿಮಾಕ್ಕೆ ಪೂಜಾ ಗಾಂಧಿ ಆಯ್ಕೆಯಾಗಿ, ಮೊದಲ ಬಾರಿಗೆ ಪೂಜಾ ಗಾಂಧಿಯನ್ನು ಭಟ್ಟರು ಭೇಟಿ ಮಾಡಿದಾಗ ಅವರು ಹೇಳಿದ್ದ ಜೋಕ್ ಒಂದನ್ನು ಭಟ್ಟರು ನೆನಪು ಮಾಡಿಕೊಂಡರು. ಏನದು ಜೋಕು? ನೀವೇ ಕೇಳಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More