ಯೋಗೀಶ್ ಗೌಡ ಕೊಲೆ ಪ್ರಕರಣ: ಸ್ಫೋಟಕ ಹೇಳಿಕೆ ಕೊಟ್ಟ ಮಾಫಿ ಸಾಕ್ಷಿ

Edited By:

Updated on: Apr 16, 2026 | 11:28 AM

ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ನಂತರ ಯೋಗೀಶ್ ಗೌಡ ಕೊಲೆ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಧಾರವಾಡದ ಕೆಸಿಡಿ ವೃತ್ತದ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುತ್ತಗಿ, ತಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡುವಂತೆ ದೇವರಿಗೆ ಮೊರೆ ಹೋಗಿದ್ದಾರೆ. ತಮ್ಮ ಹೋರಾಟ ಈ ಪವಿತ್ರ ಸ್ಥಳದಿಂದಲೇ ಆರಂಭವಾಗಿದೆ ಎಂದು ಹೇಳಿದ್ದಾರೆ.

ಧಾರವಾಡ, ಏಪ್ರಿಲ್​​ 16: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ, ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಅವರು ಧಾರವಾಡ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಆರ್‌ಪಿಎಫ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುತ್ತಗಿ, ಇಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಜವಾದ ಹೋರಾಟ ಈಗ ಪ್ರಾರಂಭವಾಗಲಿದೆ. ಯೋಗೀಶ್ ಗೌಡರ ಹತ್ಯೆ ನಡೆದಾಗ ತಾನು ಕೂಡ ಪಿತೂರಿಯ ಭಾಗವಾಗಿದ್ದೆ ಎಂಬ ಪಾಪಪ್ರಜ್ಞೆ ತನಗೆ ಕಾಡುತ್ತಿತ್ತು ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us