AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Apr 15, 2026 | 3:01 PM

Share

ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ತೀರ್ಪು ಪ್ರಕಟಗೊಂಡ ಬಳಿಕ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದ್ದು, ವಿನಯ್ ಕುಲಕರ್ಣಿ ನಿವಾಸದ ಬಳಿ 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹಾಗೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ರೌಂಡ್ಸ್ ಹಾಕುತ್ತಿದ್ದಾರೆ.

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More