ರಾಮನಗರ ಹೆಸರು ಬದಲಾವಣೆಗೆ ವಿರೋಧಿಸುತ್ತಿದ್ದ ಯೋಗೇಶ್ವರ್ ಈಗ ಬದಲಾವಣೆಯನ್ನು ಸ್ವಾಗತಿಸುತ್ತಿದ್ದಾರೆ!

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2025 | 2:32 PM

ರಾಮನಗರ ತಾಲೂಕು ರಾಮನಗರ ಹೆಸರಲ್ಲೇ ಉಳಿದಿಕೊಂಡಿದೆ, ರಾಮನಗರ ಎಲ್ಲೂ ಹೋಗಿಲ್ಲ, ಶಿವಕುಮಮಾರ್ ಅವರು ಬೆಂಗಳೂರುನವರು ಬೆಂಗಳೂರುನವರಾಗೇ ಉಳಿಯಬೇಕು ಅಂತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಅಂತ ಹೆಸರಿಟ್ಟಿದ್ದಾರೆ, ಅವರ ನಿರ್ಧಾರಕ್ಕೆ ಸ್ವಾಗತವಿದೆ, ಅದರಿಂದ ಜಿಲ್ಲೆಯ ಜನರಿಗೆ ಅನುಕೂಲವಾಗುತ್ತದೆ ಅಂದರೆ ಬಹಳ ಸಂತೋಷ ಎಂದು ಯೋಗೇಶ್ವರ್ ಹೇಳಿದರು.

ರಾಮನಗರ, ಮೇ 29: ನಮ್ಮ ರಾಜಕಾರಣಿ ಅನುಕೂಲಸಿಂಧುಗಳು ಅನ್ನೋದು ಗೊತ್ತಿರದ ವಿಷಯವೇನಲ್ಲ, ಗಾಳಿ ಬೀಸಿದೆಡೆ ತಿರುಗುತ್ತಾರೆ. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ ಚನ್ನಪಟ್ಟಣ ಅಸೆಂಬ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 25 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದ ಸಿಪಿ ಯೋಗೇಶ್ವರ್; ಬಿಜೆಪಿಯಲ್ಲಿದ್ದಾಗ ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಉಗ್ರವಾಗಿ ವಿರೋಧಿಸುತ್ತಿದ್ದರು. ಆದರೆ, ಈಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  (DCM DK Shivakumar) ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಅಂತ ಪುನರ್​​ನಾಮಕರಣ ಮಾಡಿದ್ದಾರೆ. ಅದನ್ನು ವಿರೋಧಿಸದ ಯೋಗೇಶ್ವರ್ ಏನೇನೋ ಸಮಜಾಯಿಷಿಗಳನ್ನು ನೀಡುತ್ತಾರೆ.

ಇದನ್ನೂ ಓದಿ:  ರಾಮನಗರ ಇವತ್ತಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಸಿಕೊಳ್ಳುವುದು: ಡಿಕೆ ಶಿವಕುಮಾರ್, ಡಿಸಿಎಂ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.