ಮುಂಬರುವ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ: ಹೆಚ್ ಡಿ ಕುಮಾರಸ್ವಾಮಿ
ಮೂರು ವರ್ಷಗಳಿಂದ ಮಾಡದ ಅಭಿವೃದ್ಧಿ ಕೆಲಸಗಳನ್ನು ಈಗ ಯಾಕೆ ಮಾಡುತ್ತಿದ್ದಾರೆ? ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಮತ್ತು ನಂತರವೂ ತಾವು ಚನ್ನಪಟ್ಟಣದ ಅಭಿವೃದ್ಧಿಗೆ ಶ್ರಮಿಸಿರುವುದಾಗಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ವಿಧಾನ ಪರಿಷತ್ ಸದಸ್ಯ (MLC) ಸಿಪಿ ಯೋಗೇಶ್ವರ್ ವಿರುದ್ಧ ಇಂದು ಚನ್ನಪಟ್ಟಣದ ಭೈರಾಪಟ್ಟಣದಲ್ಲಿ ನಡೆದ ಪ್ರತಿಭಟನೆ ಮತ್ತು ಆಮೇಲೆ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಪ್ರತಿಕ್ರಿಯೆ ನೀಡಿದ್ದಾರೆ, ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡಿದ ಕುಮಾರಸ್ವಾಮಿ ಅವರು, ಕೇವಲ ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ, ಮೂರು ವರ್ಷಗಳಿಂದ ಮಾಡದ ಅಭಿವೃದ್ಧಿ ಕೆಲಸಗಳನ್ನು ಈಗ ಯಾಕೆ ಮಾಡುತ್ತಿದ್ದಾರೆ? ಮೈತ್ರಿ ಸರ್ಕಾರ (coalition government) ಅಧಿಕಾರದಲ್ಲಿದ್ದಾಗ ಮತ್ತು ನಂತರವೂ ತಾವು ಚನ್ನಪಟ್ಟಣದ ಅಭಿವೃದ್ಧಿಗೆ ಶ್ರಮಿಸಿರುವುದಾಗಿ ಹೇಳಿದರು.