ಯೋಗೇಶ್ವರ್ ಪಕ್ಷೇತರನಾಗಿ ಸ್ಪರ್ಧಿಸಲಿರೋದು ಚನ್ನಪಟ್ಟಣದಲ್ಲಿ ನಿಖಿಲ್​ಗೆ ಹಾದಿ ಸುಗಮವಾದಂತೆಯೇ!

|

Updated on: Oct 22, 2024 | 4:49 PM

ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ದೇವೇಗೌಡ ಮತ್ತು ಕುಮಾರಸ್ವಾಮಿ ಕಾರ್ಯಕರ್ತರನ್ನು ಕುಟುಂಬದ ಭಾಗವೆಂದು ಭಾವಿಸಿದ್ದಾರೆ; ಆದರೆ ಬಿಜೆಪಿಯಲ್ಲಿರುವ ಒಕ್ಕಲಿಗ ಸಮುದಾಯದ ನಾಯಕರನ್ನು ತುಳಿಯುವ ಪ್ರಯತ್ನ ಕುಮಾರಸ್ವಾಮಿ ಮಾಡುತ್ತಿದ್ದಾರೆ ಅಂಥ ಯೋಗೇಶ್ವರ್ ಆಪಾದಿಸಿಸುತ್ತಾರೆ ಎಂದು ಹೇಳಿದರು.

ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಹಿರಿಯರಾದ ಹೆಚ್ ಡಿ ದೇವೇಗೌಡ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಇತರ ಕೆಲ ಮುಖಂಡರು ರಾಮನಗರರ ಮತ್ತು ಚನ್ನಪಟ್ಟಣ ಕ್ಷೇತ್ರಗಳ ಕಾರ್ಯಕರ್ತರೊಡನೆ ಸಭೆ ನಡೆಸಿದರು. ಸಿಪಿ ಯೋಗೇಶ್ವರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದರಿಂದ ನಿಖಿಲ್ ಕುಮಾರಸ್ವಾಮಿ ಅವರ ಎನ್​ಡಿಎ ಅಭ್ಯರ್ಥಿಯಾಗಿ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲು ಹಾದಿ ಸುಗಮವಾದಂತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯೋಗೇಶ್ವರ್ ಹಠವನ್ನು ಜೆಡಿಎಸ್ ಬಹಳಷ್ಟು ಸಹಿಸಿಕೊಂಡಿತು: ನಿಖಿಲ್ ಕುಮಾರಸ್ವಾಮಿ

Published on: Oct 22, 2024 04:48 PM