ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಿರೋದು ಬಿಜೆಪಿ ಹೈಕಮಾಂಡ್ಗೆ ಬಿಟ್ಟ ವಿಚಾರ: ಜನಾರ್ಧನರೆಡ್ಡಿ
ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಜನಾರ್ಧನರೆಡ್ಡಿಯವರು ನಿರಾಸಕ್ತಿಯಿಂದ ಉತ್ತರಿಸಿದರು. ಅವರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ವಿಚಾರ ತಮ್ಮ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು, ಕಾರ್ಯಕರ್ತರು ಅದರ ಬಗ್ಗೆ ಯೋಚಿಸಬೇಕಿಲ್ಲ ಎಂದು ಅವರು ಹೇಳಿದರು.
ಬಳ್ಳಾರಿ: ಸಂಡೂರು ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಎಸ್ ದಿವಾಕರ್ ಬಂಡಾಯವೆದ್ದಿದ್ದಾರೆ ಎಂದು ಹೇಳಿದರೆ ಶಾಸಕ ಗಾಲಿ ಜನಾರ್ಧನರೆಡ್ಡಿ ಬೇಜಾರು ಮಾಡಿಕೊಳ್ಳುತ್ತಾರೆ. ಅಸಲಿಗೆ ಅವರು ಬಿಜೆಪಿ ಅಭ್ಯರ್ಥಿಗಾಗಿ ಕೆಲಸ ಮಾಡುತ್ತ ಮತದಾರರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ ರೆಡ್ಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹೇಳಿದ ಹಾಗೆ ಬಿಜೆಪಿಯ ಚಿಹ್ನೆಯಾಗಿರುವ ಕಮಲದ ಹೂವೇ ಎಲ್ಲ ಕಡೆಯೂ ಅಭ್ಯರ್ಥಿ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಜನಾರ್ಧನ ರೆಡ್ಡಿ ವಿರುದ್ಧ ಕಾಮೆಂಟ್ ಮಾಡಲ್ಲವೆಂದು ಹೇಳಿ ದೊಡ್ಡತನ ಪ್ರದರ್ಶಿಸಿದ ಬಿ ಶ್ರೀರಾಮುಲು