ಯುವ ಐಪಿಎಸ್ ಅಧಿಕಾರಿಯ ವೃತ್ತಿಬದುಕು ಆರಂಭಕ್ಕೆ ಮುನ್ನವೇ ಅಂತ್ಯಗೊಂಡಿದ್ದು ದುರದೃಷ್ಟಕರ

ಅರುಣ್​ ಕುಮಾರ್​ ಬೆಳ್ಳಿ

Updated on: Dec 02, 2024 | 10:28 AM

ತೀವ್ರವಾಗಿ ಗಾಯಗೊಂಡಿದ್ದ ಹರ್ಷವರ್ಧನ್ ಅವರನ್ನು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿತ್ತಾದರೂ ತಲೆ ಮತ್ತು ಹೊಟ್ಟೆಭಾಗದಲ್ಲಿ ಭಾರೀ ಸ್ವರೂಪದ ಗಾಯಗಳಾಗಿದ್ದರಿಂದ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಹರ್ಷವರ್ಧನ್​ಗೆ ಚಿಕಿತ್ಸೆ ನೀಡಿದ ವೈದ್ಯರೊಬ್ಬರು ಹೇಳುತ್ತಾರೆ.

ಹಾಸನ: ಇದು ದುರದೃಷ್ಟಕರ ಅಂತ ಹೇಳಿದರೆ ಅಂಡರ್​ಸ್ಟೇಟ್ಮೆಂಟ್ ಅನಿಸಿಕೊಳ್ಳುತ್ತದೆ. ಒಬ್ಬ ಐಪಿಎಸ್ ಅಧಿಕಾರಿಯ ವೃತ್ತಿಬದುಕು ಆರಂಭಗೊಳ್ಳುವ ಮುನ್ನವೇ ದಾರುಣವಾಗಿ ಮುರುಟಿಹೋಗಿದೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ನಡೆದ ರಸ್ತೆ ಅಪಘಾತವೊಂದರಲ್ಲಿ 26-ವರ್ಷ ವಯಸ್ಸಿನ ಹರ್ಷವರ್ಧನ್ ಬಲಿಯಾಗಿದ್ದಾರೆ. ನಮ್ಮ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಬಿಹಾರದವರಾಗಿದ್ದರೂ ಮಧ್ಯಪ್ರದೇಶದಲ್ಲಿ ವಾಸವಾಗಿದ್ದ ಮೃತ ಅಧಿಕಾರಿಯು 2023-24 ಐಪಿಎಸ್ ಬ್ಯಾಚ್​ನಲ್ಲಿ ಉತ್ತೀರ್ಣಗೊಂಡು ಕರ್ನಾಟಕ ಕೇಡರ್​​ನಲ್ಲಿ ಆಯ್ಕೆಯಾಗಿ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಹಾಸನ ಜಿಲ್ಲಾ ಎಸ್​ಪಿ ಕಚೇರಿಯಲ್ಲಿ ಕೆಲಸಕ್ಕೆ ವರದಿ ಮಾಡಿಕೊಳ್ಳಲು ಜೀಪೊಂದರಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ತುಮಕೂರು ರಸ್ತೆ ಅಪಘಾತದಲ್ಲಿ 6 ಸಾವು: ಸ್ಥಳಕ್ಕೆ ಎಡಿಜಿಪಿ ಅಲೋಕ್​ ಕುಮಾರ್, ಕೇಂದ್ರ ವಲಯ ಐಜಿಪಿ ಲಾಬೂರಾಮ್​ ಭೇಟಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.