Viral Video: ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ಸಾವು ಯಾರಿಗೂ ಹೇಳಿ ಕೇಳಿ ಬರುವುದಿಲ್ಲ. ಮಧ್ಯಪ್ರದೇಶದ ರೇವಾದಲ್ಲಿ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಅಂಗಡಿಯೊಂದರಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದಾಗ ಹೃದಯಾಘಾತವಾಗಿ ಕ್ಷಣಾರ್ಧದಲ್ಲಿ ಸಾವನ್ನಪ್ಪಿದ್ದಾನೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಕ್ಟೋಬರ್ 20ರಂದು ಸಿರ್ಮೌರ್ ಚೌರಾಹಾದಲ್ಲಿರುವ ಅಂಗಡಿಯೊಂದರಲ್ಲಿ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಹರಟೆ ಹೊಡೆಯುತ್ತಾ ಕುಳಿತಿದ್ದಾಗ ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದ್ದಕ್ಕಿದ್ದಂತೆ ಪ್ರಕಾಶ್ ಎಂಬ ಯುವಕನಿಗೆ ಎದೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿತು. ಆಗ ಕುರ್ಚಿಯಿಂದ ಕೆಳಗೆ ಬಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರೊಳಗೆ ಹೃದಯಾಘಾತದಿಂದ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

