ರಸ್ತೆ ದಾಟುವಾಗ ಯುವತಿ ಸಾವು; ಆಘಾತಕಾರಿ ವಿಡಿಯೋ ವೈರಲ್
ಹೈದರಾಬಾದ್ ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಶುಕ್ರವಾರ ರಾತ್ರಿ ಮಾದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಗೆ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ. ಅದರ ಶಾಕಿಂಗ್ ವಿಡಿಯೋ ವೈರಲ್ ಆಗಿದೆ.
ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಿದೆ. ಚಾಲನೆ ಮಾಡುವಾಗ ನಿರ್ಲಕ್ಷ್ಯ, ಸುರಕ್ಷತಾ ಮಾನದಂಡಗಳನ್ನು ಅನುಸರಿಸದಿರುವುದು, ಅತಿಯಾದ ವೇಗದಲ್ಲಿ ಚಾಲನೆ ಇದಕ್ಕೆ ಮುಖ್ಯ ಕಾರಣ. ಇತ್ತೀಚೆಗೆ ಹೈದರಾಬಾದ್ ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶುಕ್ರವಾರ ರಾತ್ರಿ ಮಾದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಿಜಿಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಯುವತಿಗೆ ಡಿಕ್ಕಿ ಹೊಡೆದು ಯುವತಿ ಪ್ರಾಣ ಕಳೆದುಕೊಂಡಿದ್ದಾಳೆ. 25 ವರ್ಷದ ಕಾಲುವ ಮಾಧವಿ ಎಂಬ ಯುವತಿ ರಸ್ತೆ ದಾಟುವಾಗ ಯಾವ ರೀತಿ ಸಾವನ್ನಪ್ಪಿದಳು ಎಂಬುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ