ಪೊಲೀಸ್ ತಪಾಸಣೆ ವೇಳೆ ತಪ್ಪಿಸಿಕೊಂಡು ಹೋಗಲು ಯತ್ನ: ಆಯತಪ್ಪಿ ಬಿದ್ದ ಯುವತಿ, ಗಂಭೀರ ಗಾಯ

Edited By:

Updated on: Jul 16, 2023 | 4:19 PM

ದ್ವಿಚಕ್ರ ವಾಹನ ಸವಾರರ ತಪಾಸಣೆ ವೇಳೆ ಹೆಲ್ಮೆಟ್ ಧರಿಸದ ಯುವತಿ ತಪ್ಪಿಸಿಕೊಂಡು ಹೋಗುವಾಗ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿರುವಂತಹ ಘಟನೆ ಅಶೋಕಪುರಂ ಪೊಲೀಸ್ ಠಾಣೆ ಬಳಿಯ ಜಯನಗರದಲ್ಲಿ ನಡೆದಿದೆ.

ಮೈಸೂರು: ದ್ವಿಚಕ್ರ ವಾಹನ ಸವಾರರ ತಪಾಸಣೆ ವೇಳೆ ಹೆಲ್ಮೆಟ್ ಧರಿಸದ ಯುವತಿ (woman) ತಪ್ಪಿಸಿಕೊಂಡು ಹೋಗುವಾಗ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿರುವಂತಹ ಘಟನೆ ಅಶೋಕಪುರಂ ಪೊಲೀಸ್ ಠಾಣೆ ಬಳಿಯ ಜಯನಗರದಲ್ಲಿ ನಡೆದಿದೆ. ಬೈಕ್​ನಲ್ಲಿ ಹೆಲ್ಮೆಟ್ ಧರಿಸದೆ ಪೊಲೀಸರಿಂದ ಯುವತಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಈ ವೇಳೆ ಸಂಚಾರ ಪೊಲೀಸರು ತಡೆಯಲು ಯತ್ನಿಸಿದ್ದು, ಸ್ಕೂಟರ್​​ನಿಂದ ಬಿದ್ದು ಗಾಯಗೊಂಡಿದ್ದಾರೆ. ಸದ್ಯ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.  ಕುವೆಂಪುನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More