ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ; ಶಾಕಿಂಗ್ ವಿಡಿಯೋ ನೋಡಿ

Updated on: Mar 06, 2026 | 7:09 PM

ತನ್ನ ಮನೆಯ ಮುಂದೆ ನಿಂತಿದ್ದ ಆಟೋದ ಕೆಳಗೆ ಹೋಗಿದ್ದ ಪುಟ್ಟ ನಾಯಿಮರಿಗಳನ್ನು ಎತ್ತಿ ಆಕೆ ಕಾಂಪೌಂಡ್​ ಗೋಡೆಗೆ ಬಡಿದಿದ್ದಾಳೆ. ಇದರಿಂದ ಚೀರಾಡುತ್ತಾ ಆ ನಾಯಿಮರಿಗಳು ಕೆಳಗೆ ಬಿದ್ದಿವೆ. ಇನ್ನೆರಡು ನಾಯಿಗಳನ್ನು ಕುತ್ತಿಗೆಗೆ ಹಗ್ಗ ಹಾಕಿ ನೇತು ಹಾಕಿದ್ದಾಳೆ. ಅವುಗಳಲ್ಲಿ ಎರಡು ಮರಿಗಳು ಸತ್ತುಹೋಗಿವೆ. ನಾಯಿ ಮರಿಗಳ ಮೇಲಿನ ಈ ಕ್ರೌರ್ಯವನ್ನು ತೀವ್ರವಾಗಿ ಟೀಕಿಸಲಾಗುತ್ತಿದೆ. ಯುವತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಚೆನ್ನೈ, ಮಾರ್ಚ್ 6: ತಮಿಳುನಾಡಿನಲ್ಲಿ ಪ್ರಾಣಿ ಪ್ರಿಯರನ್ನು ಆಘಾತಕ್ಕೀಡು ಮಾಡಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳು ನಾಯಿಗಳ (Dog Video) ಮೇಲೆ ತನ್ನ ಕೋಪವನ್ನು ಹೊರಹಾಕುವ ಭರದಲ್ಲಿ ಅವುಗಳ ಜೀವದ ಜೊತೆ ಆಟವಾಡಿದ್ದಾಳೆ. ತನ್ನ ಮನೆಯ ಮುಂದೆ ನಿಂತಿದ್ದ ಆಟೋದ ಕೆಳಗೆ ಹೋಗಿದ್ದ ಪುಟ್ಟ ನಾಯಿಮರಿಗಳನ್ನು ಎತ್ತಿ ಆಕೆ ಕಾಂಪೌಂಡ್​ ಗೋಡೆಗೆ ಬಡಿದಿದ್ದಾಳೆ. ಇದರಿಂದ ಚೀರಾಡುತ್ತಾ ಆ ನಾಯಿಮರಿಗಳು ಕೆಳಗೆ ಬಿದ್ದಿವೆ. ಇನ್ನೆರಡು ನಾಯಿಗಳನ್ನು ಕುತ್ತಿಗೆಗೆ ಹಗ್ಗ ಹಾಕಿ ನೇತು ಹಾಕಿದ್ದಾಳೆ. ಅವುಗಳಲ್ಲಿ ಎರಡು ಮರಿಗಳು ಸತ್ತುಹೋಗಿವೆ. ನಾಯಿ ಮರಿಗಳ ಮೇಲಿನ ಈ ಕ್ರೌರ್ಯವನ್ನು ತೀವ್ರವಾಗಿ ಟೀಕಿಸಲಾಗುತ್ತಿದೆ. ಯುವತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More