IPL 2025: ಸಿಕ್ಸ್ ಬಾರಿಸುವ ಮೂಲಕವೇ ಐಪಿಎಲ್ ವೃತ್ತಿಜೀವನ ಆರಂಭಿಸಿದ 14 ವರ್ಷದ ವೈಭವ್; ವಿಡಿಯೋ
Vaibhav Suryavanshi 1st ball six: 14 ವರ್ಷದ ವೈಭವ್ ಸೂರ್ಯವಂಶಿ ಅವರು ಐಪಿಎಲ್‌ನಲ್ಲಿ ಆಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅವರು ಐಪಿಎಲ್ ಹರಾಜಿನಲ್ಲಿ ಹರಾಜಾದ ಅತ್ಯಂತ ಕಿರಿಯ ಆಟಗಾರರಾಗಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಪರ ಆಡುತ್ತಿರುವ ವೈಭವ್ ತಮ್ಮ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿ ಎಲ್ಲರನ್ನೂ ಆಶ್ಚರ್ಯಗೊಳಿಸಿದ್ದಾರೆ. ಇದು ಅವರ ಕ್ರಿಕೆಟ್ ವೃತ್ತಿಜೀವನದ ಉತ್ತಮ ಆರಂಭವಾಗಿದೆ.
ವೈಭವ್ ಸೂರ್ಯವಂಶಿ… ಕೇವಲ 14 ವರ್ಷಕ್ಕೆ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ ಆಡುವ ಅವಕಾಶ ಪಡೆದಿರುವ 9ನೇ ತರಗತಿ ಓದುತ್ತಿರುವ ಹುಡುಗ ಕ್ರಿಕೆಟ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಮೊದಲು ಐಪಿಎಲ್ ಹರಾಜಿನಲ್ಲಿ ಹರಾಜಾದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೈಭವ್, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವ ಮೂಲಕ ಕೇವಲ 14 ವರ್ಷ ಮತ್ತು 27 ದಿನಗಳ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಇದೀಗ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದಿರುವ ವೈಭವ್ ತಮ್ಮ ಐಪಿಎಲ್ ವೃತ್ತಿಜೀವನದ ಮೊದಲ ಎಸೆತದಲ್ಲೇ ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ಇಡೀ ಜಗತ್ತನ್ನೇ ಅಚ್ಚರಿಗೊಳಿಸಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 180 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ ಪರ ಯಶಸ್ವಿ ಹಾಗೂ ವೈಭವ್ ಆರಂಭಿಕರಾಗಿ ಕಣಕ್ಕಿಳಿದರು. ಇತ್ತ ಲಕ್ನೋ ಪರ ಮೊದಲ ಓವರ್ ಎಸೆದ ಶಾರ್ದೂಲ್ ಠಾಕೂರ್ ಅವರ ಮೊದಲ ಮೂರು ಎಸೆತಗಳನ್ನು ಯಶಸ್ವಿ ಜೈಸ್ವಾಲ್ ಆಡಿದರು. ನಾಲ್ಕನೇ ಎಸೆತವನ್ನು ಆಡುವ ಅವಕಾಶ ವೈಭವ್‌ಗೆ ಸಿಕ್ಕಿತು. ಆದರೆ ವೈಭವ್ ಈ ರೀತಿ ಐಪಿಎಲ್ ವೃತ್ತಿಜೀವನ ಆರಂಭಿಸುತ್ತಾರೆಂದು ಯಾರೂ ಊಹಿಸಿರಲಿಲ್ಲ. ಶಾರ್ದೂಲ್ ಅವರ ಓವರ್‌ನ ನಾಲ್ಕನೇ ಎಸೆತದಲ್ಲಿ, ವೈಭವ್ ಲೆಗ್ ಸ್ಟಂಪ್ ಕಡೆ ಸ್ವಲ್ಪ ಜಾಗ ಮಾಡಿಕೊಂಡು ಕವರ್ಸ್ ಮೇಲೆ ಭರ್ಜರಿ ಸಿಕ್ಸರ್ ಬಾರಿಸಿದರು.
ವೈಭವ್ ಅವರ ಈ ಸಿಕ್ಸರ್ ಕ್ರೀಡಾಂಗಣದಲ್ಲಿ ನೆರೆದಿದ್ದವರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತು. 14 ನೇ ವಯಸ್ಸಿನಲ್ಲಿ ಚೊಚ್ಚಲ ಪಂದ್ಯವಾಡಿದ ಬ್ಯಾಟ್ಸ್‌ಮನ್‌ನಿಂದ ಮೊದಲ ಎಸೆತದಲ್ಲೇ ಇಂತಹ ಹೊಡೆತವನ್ನು ಯಾರೂ ನಿರೀಕ್ಷಿಸಿರಲಿಲ್ಲ, ಅದು ಕೂಡ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಅನುಭವ ಹೊಂದಿರುವ ಶಾರ್ದೂಲ್ ಠಾಕೂರ್ ವಿರುದ್ಧ. ಇದರೊಂದಿಗೆ, ಅವರು ಐಪಿಎಲ್‌ನಲ್ಲಿ ಸಿಕ್ಸರ್ ಬಾರಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ