ನಿಮ್ಮ 18 ನಿಮಿಷದ ವಿಡಿಯೋ ಇದರಲ್ಲಿದೆ: ಪೆನ್​ಡ್ರೈವ್​ ತೋರಿಸಿದ್ದ ಕುಮಾರಸ್ವಾಮಿಗೆ ಎಂ ಲಕ್ಷ್ಮಣ ತಿರುಗೇಟು

Rakesh Nayak Manchi

Updated on: Aug 08, 2023 | 3:52 PM

ಕಾಂಗ್ರೆಸ್ ನಾಯಕರ ಬಂಡವಾಳ ಇದರಲ್ಲಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ಪೆನ್​ಡ್ರೈವ್ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ಕೆಪಿಸಿಸಿ ವಕ್ತರಾ ಲಕ್ಷ್ಮಣ್ ಅವರು ಪೆನ್​ಡ್ರೈವ್ ತೋರಿಸಿದ್ದಾರೆ.

ಮೈಸೂರು, ಆಗಸ್ಟ್ 8: ಕಾಂಗ್ರೆಸ್ ನಾಯಕರ ಬಂಡವಾಳ ಇದರಲ್ಲಿದೆ ಎಂದು ಹೆಚ್​ಡಿ ಕುಮಾರಸ್ವಾಮಿ (H. D. Kumaraswamy) ಅವರು ಪೆನ್​ಡ್ರೈವ್ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ (M. Lakshman) ಅವರು ಸುದ್ದಿಗೋಷ್ಠಿಯಲ್ಲಿ ಪೆನ್​ಡ್ರೈವ್​ವೊಂದನ್ನು ತೋರಿಸಿ “18 ನಿಮಿಷದ ನಿಮ್ಮ ವಿಡಿಯೋ ಇದೆ” ಎಂದಿದ್ದಾರೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ಪತ್ರ ಬರೆದಿರುವ ವಿಚಾರವಾಗಿ ಆಕ್ರೋಶ ಹೊರಹಾಕಿದ ಲಕ್ಷ್ಮಣ್, ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ 8 ಮಂದಿಯ ಸಹಿಯನ್ನ ಒಬ್ಬರೇ ಮಾಡಿದ್ದಾರೆ. ಕೃಷಿ ನಿರ್ದೇಶಕರು, ಜಂಟಿ ನಿರ್ದೇಶಕರು ತಮಗೂ ಪತ್ರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕುಮಾರಸ್ವಾಮಿ ಪೆನ್ ಡ್ರೈವ್ ಇಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಹಿಟ್ ಅಂಡ್ ರನ್ ರೀತಿ ವರ್ತಿಸುತ್ತಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us