ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್​​​​, 5 ಕೆಜಿ ಸಿಲ್ವರ್​​ ಜಪ್ತಿ

Edited By:

Updated on: Jun 25, 2026 | 5:57 PM

ಮುಖ್ಯಾಂಶಗಳು

  • ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ಬೆಳ್ಳಿ ಕಳ್ಳತನ ಪ್ರಕರಣ
  • 10 ಕೆಜಿ ಬೆಳ್ಳಿ ಆಭರಣ ಕಳವು ಮಾಡಿದ್ದವನ ಬಂಧನ
  • ಬಂಧಿತನಿಂದ 5 ಕೆಜಿ ಬೆಳ್ಳಿ ವಶಪಡಿಸಿಕೊಂಡ ಖಾಕಿ

Bengaluru News: ಬೆಂಗಳೂರಿನ ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ಅಂಗಡಿಯ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳತನ ಮಾಡಲಾಗಿತ್ತು. ಈ ಕೃತ್ಯ ಎಸಗಿದ ತಮಿಳುನಾಡು ಮೂಲದ ತೇಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲ ಬಾರಿಗೆ ಕಳ್ಳತನಕ್ಕೆ ಯತ್ನಿಸಿದ್ದ ಈತನಿಂದ ಸದ್ಯ 5 ಕೆಜಿ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಬೆಂಗಳೂರು, ಜೂನ್​​ 25: ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ನಡೆದ ಬೆಳ್ಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ. ಅಂಗಡಿಯ ಗೋಡೆ ಕೊರೆದು 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ತಮಿಳುನಾಡು ಮೂಲದ ತೇಜು ಎಂದು ಗುರುತಿಸಲಾಗಿದೆ. ಆರೋಪಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಈ ಕೃತ್ಯ ಎಸಗಿದ್ದ ಎಂಬುದರ ಜೊತೆಗೆ ಇದೇ ಮೊದಲ ಬಾರಿಗೆ ಇಂತಹ ಅಪರಾಧ ಚಟುವಟಿಕೆಯಲ್ಲಿ ಈತ ಭಾಗಿಯಾಗಿದ್ದ ಎಂಬುದು ಗೊತ್ತಾಗಿದೆ. ಬಂಧಿತನಿಂದ 5 ಕೆಜಿ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ ಬೆಳ್ಳಿ ಆಭರಣಗಳಿಗಾಗಿ ತನಿಖೆ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 25, 2026 05:56 PM
Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More