AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote: ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

Bagalkote: ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Aug 22, 2026 | 12:31 PM

Share

ಬಾಗಲಕೋಟೆ ಜಿಲ್ಲೆಯ ಅಮೀನಗಡ ಪೊಲೀಸ್ ಠಾಣೆಯ ಪಿಎಸ್‌ಐ ಜ್ಯೋತಿ ವಾಳೀಕರ್ ಅವರ ವರ್ಗಾವಣೆಯನ್ನು ಯುವಕರು ಸಂಭ್ರಮಿಸಿದ್ದಾರೆ. ಅಮೀನಗಡದಿಂದ ಕಲಾದಗಿ ಠಾಣೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಠಾಣೆಯ ಎದುರು ಪಟಾಕಿ ಸಿಡಿಸಿ ಯುವಕರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಈ ಕುರಿತು ಟಿವಿ9 ಕನ್ನಡ ಸುದ್ದಿ ಪ್ರಸಾರ ಮಾಡಿದೆ.

ಬಾಗಲಕೋಟೆ, ಆಗಸ್ಟ್ 22: ಜಿಲ್ಲೆಯ ಅಮೀನಗಡ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಜ್ಯೋತಿ ವಾಳೀಕರ್ ಅವರ ವರ್ಗಾವಣೆಯನ್ನು ಯುವಕರು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಪಿಎಸ್‌ಐ ಜ್ಯೋತಿ ವಾಳೀಕರ್ ಅವರನ್ನು ಅಮೀನಗಡದಿಂದ ಕಲಾದಗಿ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಈ ವರ್ಗಾವಣೆಯಿಂದ ಯುವಕರು ಅತೀವ ಸಂತೋಷಗೊಂಡಿದ್ದಾರೆ. ತಮ್ಮ ಸಂತೋಷವನ್ನು ವ್ಯಕ್ತಪಡಿಸಲು ಯುವಕರು ಪೊಲೀಸ್ ಠಾಣೆಯ ಎದುರೇ ಪಟಾಕಿ ಸಿಡಿಸಿ ಅದ್ದೂರಿಯಾಗಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಅಮೀನಗಡ ಠಾಣೆಯ ಕಾಂಪೌಂಡ್ ಎದುರು ರಾತ್ರಿ ವೇಳೆ ಪಟಾಕಿಗಳನ್ನು ಹಚ್ಚಿ ಕುಣಿದು ಕುಪ್ಪಳಿಸುತ್ತಾ ಯುವಕರು ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಈ ವಿಶಿಷ್ಟ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಪಿಎಸ್‌ಐ ಜ್ಯೋತಿ ವಾಳೀಕರ್ ಅವರ ವರ್ಗಾವಣೆಯು ಸ್ಥಳೀಯ ಯುವಕರಿಗೆ ಸಂತಸದ ವಿಷಯವಾಗಿದ್ದು, ಅವರ ವರ್ಗಾವಣೆಯನ್ನು ದೊಡ್ಡ ಹಬ್ಬದಂತೆ ಆಚರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 22, 2026 12:31 PM

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More