ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

Edited By:

Updated on: Jul 12, 2026 | 11:00 AM

ಮುಖ್ಯಾಂಶಗಳು

  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಆಕ್ರೋಶ
  • ಯುವ ಕಾಂಗ್ರೆಸ್​​ನಿಂದ ಬೆಂಗಳೂರಲ್ಲಿ ಸೈಕಲ್​​ ಜಾಥಾ
  • ಜಾಥಾಗೆ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್​​ರಿಂದ ಚಾಲನೆ

ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದಿಂದ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರು ಸೈಕಲ್ ತುಳಿಯುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಲಾಯಿತು.

ಬೆಂಗಳೂರು, ಜುಲೈ 12: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದಿಂದ ಬೃಹತ್ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕೆಪಿಸಿಸಿ ಕಚೇರಿಯಿಂದ ಕೆ.ಆರ್. ಸರ್ಕಲ್, ಆನಂದರಾವ್ ವೃತ್ತದವರೆಗೆ ಈ ಜಾಥಾ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರು ಸೈಕಲ್ ತುಳಿಯುವ ಮೂಲಕ ಜಾಥಾಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಹಲವು ಪ್ರಮುಖರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More