AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ ಅಂಟಿಸಿ ಯುವ ಕಾಂಗ್ರೆಸ್ ಆಕ್ರೋಶ!

ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ ಅಂಟಿಸಿ ಯುವ ಕಾಂಗ್ರೆಸ್ ಆಕ್ರೋಶ!

ಭಾವನಾ ಹೆಗಡೆ
|

Updated on: Nov 07, 2026 | 12:33 PM

Share

ಕರ್ನಾಟಕದಲ್ಲಿ ಯುವ ಕಾಂಗ್ರೆಸ್ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ ಮತ್ತು ಬಸವರಾಜ ಬೊಮ್ಮಾಯಿ ಅವರ ನಿವಾಸಗಳ ಮುಂದೆ ಪೋಸ್ಟರ್‌ಗಳನ್ನು ಅಂಟಿಸಿದೆ. "ಕಾಂಗ್ರೆಸ್ ದೇಶಕ್ಕಾಗಿ ಹುಟ್ಟಿದೆ, ಬಿಜೆಪಿ ದ್ವೇಷಕ್ಕಾಗಿ ಹುಟ್ಟಿದೆ" ಎಂಬ ಸಂದೇಶದೊಂದಿಗೆ ರಾಜಕೀಯ ವಾಗ್ವಾದಕ್ಕೆ ನಾಂದಿ ಹಾಡಿದೆ. ಈ ಘಟನೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತೊಂದು ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ.

ಬೆಂಗಳೂರು, ನವೆಂಬರ್ 07: ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಸ್ಟರ್ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್‌ನವರು ದೇಶಕ್ಕಾಗಿ ಹುಟ್ಟಿದವರು, ಬಿಜೆಪಿ ದ್ವೇಷಕ್ಕಾಗಿ ಹುಟ್ಟಿದವರು” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೆ, “ಕಾಂಗ್ರೆಸ್ ಮಕ್ಕಳು ಗಾಂಧೀಜಿ ಮಕ್ಕಳು, ವಿಜಯೇಂದ್ರನ ಮಕ್ಕಳು ಕಳ್ನ ಮಕ್ಕಳು” ಎಂದು ಕಟುವಾಗಿ ನಿಂದಿಸಿ ಬರೆಯಲಾದ ಪೋಸ್ಟರ್‌ಗಳನ್ನು ಬಿಜೆಪಿ ನಾಯಕರ ಮನೆ ಬಾಗಿಲಿಗೆ ಅಂಟಿಸಲಾಗಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕಮಲ ಹಾಗೂ ಕೈ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More