ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ ಅಂಟಿಸಿ ಯುವ ಕಾಂಗ್ರೆಸ್ ಆಕ್ರೋಶ!
ಕರ್ನಾಟಕದಲ್ಲಿ ಯುವ ಕಾಂಗ್ರೆಸ್ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ ಮತ್ತು ಬಸವರಾಜ ಬೊಮ್ಮಾಯಿ ಅವರ ನಿವಾಸಗಳ ಮುಂದೆ ಪೋಸ್ಟರ್‌ಗಳನ್ನು ಅಂಟಿಸಿದೆ. "ಕಾಂಗ್ರೆಸ್ ದೇಶಕ್ಕಾಗಿ ಹುಟ್ಟಿದೆ, ಬಿಜೆಪಿ ದ್ವೇಷಕ್ಕಾಗಿ ಹುಟ್ಟಿದೆ" ಎಂಬ ಸಂದೇಶದೊಂದಿಗೆ ರಾಜಕೀಯ ವಾಗ್ವಾದಕ್ಕೆ ನಾಂದಿ ಹಾಡಿದೆ. ಈ ಘಟನೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತೊಂದು ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ.
ಬೆಂಗಳೂರು, ನವೆಂಬರ್ 07: ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಸ್ಟರ್ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕಾಂಗ್ರೆಸ್‌ನವರು ದೇಶಕ್ಕಾಗಿ ಹುಟ್ಟಿದವರು, ಬಿಜೆಪಿ ದ್ವೇಷಕ್ಕಾಗಿ ಹುಟ್ಟಿದವರು” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೆ, “ಕಾಂಗ್ರೆಸ್ ಮಕ್ಕಳು ಗಾಂಧೀಜಿ ಮಕ್ಕಳು, ವಿಜಯೇಂದ್ರನ ಮಕ್ಕಳು ಕಳ್ನ ಮಕ್ಕಳು” ಎಂದು ಕಟುವಾಗಿ ನಿಂದಿಸಿ ಬರೆಯಲಾದ ಪೋಸ್ಟರ್‌ಗಳನ್ನು ಬಿಜೆಪಿ ನಾಯಕರ ಮನೆ ಬಾಗಿಲಿಗೆ ಅಂಟಿಸಲಾಗಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕಮಲ ಹಾಗೂ ಕೈ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
