ತುಮಕೂರು: ನಡು ರಸ್ತೆಯಲ್ಲಿ ತಲ್ವಾರ್ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್ನಿಂದ ಕೇಕ್ ಕತ್ತರಿಸಿ ಯುವಕರು ಹುಟ್ಟು ಹಬ್ಬ ಆಚರಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಾನೂನು ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗೃಹ ಸಚಿವ ಜಿ ಪರಮೇಶ್ವರ (G Parameshwara) ತವರು ಜಿಲ್ಲೆಯಲ್ಲಿ ಕಾನೂನು ಉಲ್ಲಂಘನೆ. ತುಮಕೂರು (Tumakur) ಜಿಲ್ಲೆಉ ಗುಬ್ಬಿ (Gubbi) ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಯುವಕರು ತಲ್ವಾರ್ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಶಾರುಖ್, ಮುಗಲ್ ಪಾಷ ಎಂಬ ಯುವಕರು ರಸ್ತೆ ಮಧ್ಯದಲ್ಲಿ ನಿಂತು ತಲ್ವಾರ್ನಿಂದ ಕೇಕ್ ಕತ್ತರಿಸಿದ್ದಾರೆ. ಅಲ್ಲದೇ, ನಡು ರಸ್ತೆಯಲ್ಲೇ ಪಟಾಕಿ ಪಟಾಕಿ ಸಿಡಿಸಿದ್ದು, ಸವಾರರಿಗೆ ತೊಂದರೆಯಾಯಿತು. ತಲ್ವಾರ್ನಿಂದ ಕೇಕ್ ಕತ್ತರಿಸಿದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾತಾಣದಲ್ಲಿ ಈ ವಿಡಿಯೋ ಹರಿಬಿಟ್ಟಿದ್ದು, ಮೈ ಕಿಂಗ್ ಬರ್ತಡೆ ಎಂದು ಕ್ಯಾಪ್ಶನ್ ಅಂತ ಹಾಕಿಕೊಂಡಿದ್ದಾರೆ. ಯುವಕರ ಹುಟ್ಟುಹಬ್ಬ ಆಚರಣೆಗೆ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos