Chikkamagaluru: ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್; ವಿಡಿಯೋ ವೈರಲ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿದ ಮತ್ತಲ್ಲಿದ್ದ ಯುವಕನೋರ್ವ ಬೀದಿ ನಾಯಿ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಕೆಲವರು ನಾಯಿ ಜೊತೆಗೆ ಯುವಕನ ಡ್ಯಾನ್ಸ್ಗೆ ಖುಷಿ ಪಟ್ಟಿದ್ದರೆ, ಇನ್ನು ಕೆಲವರು ಕುಡಿದ ಮತ್ತಿನಲ್ಲಿ ಬೀದಿ ನಾಯಿಗೆ ಹಿಂಸೆ ನೀಡಲಾಗಿದೆ ಎಂದು ದೂರಿದ್ದಾರೆ.
ಚಿಕ್ಕಮಗಳೂರು, ಜನವರಿ 01: ಹೊಸ ವರ್ಷದ ಹಿನ್ನೆಲೆ ರಾಜ್ಯಾದ್ಯಂತ ಪಾರ್ಟಿಗಳು ಜೋರಾಗಿಯೇ ನಡೆದಿವೆ. ಅತಿಯಾದ ಮದ್ಯ ಸೇವನೆ ಕಾರಣ ಹಲವರು ರಸ್ತೆಯಲ್ಲಿಯೇ ತೂರಾಟ ಕೂಡ ನಡೆಸಿದ್ದಾರೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿದ ಮತ್ತಲ್ಲಿದ್ದ ಯುವಕನೋರ್ವ ಬೀದಿ ನಾಯಿ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನ್ಯೂ ಇಯರ್ ಹಿನ್ನೆಲೆ ಕಣತಿ ಗ್ರಾಮದ ಸಂದೀಪ್ ಮತ್ತು ಸ್ನೇಹಿತರು ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಬೀದಿ ನಾಯಿಯ ಮುಂಬದಿ ಕಾಲುಗಳನ್ನು ಹಿಡಿದುಕೊಂಡು ಸಂದೀಪ್ ಡ್ಯಾನ್ಸ್ ಮಾಡಿದ್ದಾರೆ. ವಿಡಿಯೋ ನೋಡಿದ ಕೆಲವರು ನಾಯಿ ಜೊತೆಗೆ ಯುವಕನ ಡ್ಯಾನ್ಸ್ಗೆ ಖುಷಿ ಪಟ್ಟಿದ್ದರೆ, ಇನ್ನು ಕೆಲವರು ಕುಡಿದ ಮತ್ತಿನಲ್ಲಿ ಬೀದಿ ನಾಯಿಗೆ ಹಿಂಸೆ ನೀಡಲಾಗಿದೆ ಎಂದು ದೂರಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

