Mysuru: ಬೈಕ್ಗೆ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಯುವಕರು ಪರಾರಿ
ಬೈಕ್ಗೆ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಯುವಕರು ಪರಾರಿಯಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಬದನವಾಳು ಪೆಟ್ರೋಲ್ ಬಂಕ್ಗೆ ಬೈಕ್ನಲ್ಲಿ ಬಂದಿದ್ದ ಯುವಕರು ಹಣ ಪಾವತಿ ಮಾಡುವ ನಾಟಕ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೈಸೂರು, ಸೆಪ್ಟೆಂಬರ್ 27: ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ಕೊಡದೆ ಯುವಕರು ಪರಾರಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ಬದನವಾಳುವಿನಲ್ಲಿ ನಡೆದಿದೆ. ಬಂಕ್ ಗೆ ಬೈಕ್ನಲ್ಲಿ ಬಂದ ಯುವಕರು 1,200 ರೂಪಾಯಿಗೆ ಪೆಟ್ರೋಲ್ ಹಾಕಿಸಿದ್ದಾರೆ. ಆ ಬಳಿಕ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಪಾವತಿಸುವ ನಾಟಕ ಮಾಡಿದ್ದಾರೆ. ಅಂತಿಮವಾಗಿ ಹಣ ಪಾವತಿ ಮಾಡದೆ ಯುವಕರು ಪರಾರಿ ಆಗಿರುವ ದೃಶ್ಯ ಪೆಟ್ರೋಲ್ ಬಂಕ್ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

