B Nagendra: ತಮ್ಮ ಕುರ್ಚಿಯಲ್ಲಿ ಕೂರುವ ಮೊದಲು ಸಚಿವ ಬಿ ನಾಗೇಂದ್ರ ಕುಟುಂಬದೊಂದಿಗೆ ಕಚೇರಿಯಲ್ಲಿ ಪೂಜೆ ನೆರವೇರಿಸಿದರು
ಜವಾಬ್ದಾರಿಯನ್ನು ನಿಭಾಯಿಸಲು ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಾಗೇಂದ್ರ ಕೃತಜ್ಞತೆ ಸಲ್ಲಿಸಿದರು.
ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ (council of ministers) ಕಳೆದ ವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು ಒಬ್ಬೊಬ್ಬರಾಗಿ ತಮ್ಮ ಕಚೇರಿಗಳಿಗೆ ತೆರಳಿ ಕೆಲಸ ಆರಂಭಿಸಿದ್ದಾರೆ. ಮೊದಲ ಬಾರಿಗೆ ಸಂಪುಟ ಸೇರಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಯುವಜನ ಸೇವೆ ಹಾಗೂ ಕ್ರೀಡಾ ಖಾತೆ ಸಚಿವ ಬಿ ನಾಗೇಂದ್ರ (B Nagendra) ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ತಮ್ಮ ಕಚೇರಿಯ ಕುರ್ಚಿಯಲ್ಲಿ ಆಸೀನರಾಗುವ ಮೊದಲು ಅರ್ಚಕರಿಂದ ಪೂಜಾವಿಧಿಗಳನ್ನು ನೆರವೇರಿಸಿದರು. ಅವರೊಂದಿಗೆ ಕುಟುಂಬದ ಸದಸ್ಯರನ್ನು ವಿಡಿಯೋದಲ್ಲಿ ನೋಡಬಹುದು. ಸೀಟಿನಲ್ಲಿ ಕುಳಿತ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನಾಗೇಂದ್ರ, ತಮಗೆ ಸಿಕ್ಕಿರುವ ಎರಡು ಖಾತೆಗಳಲ್ಲೂ ಕೆಲಸ ಮಾಡಲು ಸಾಕಷ್ಟು ಅವಕಾಶವಿದೆ, ಹಿರಿಯ ನಾಯಕ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವುದಾಗಿ ಹೇಳಿ ಜವಾಬ್ದಾರಿಯನ್ನು ನಿಭಾಯಿಸಲು ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ