ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಲೂರು ಬಳಿ ಆಶ್ರಯ ಮನೆ ಯೋಜನೆಗೆ ಮೀಸಲಿದ್ದ ಭೂಮಿ ವಿವಾದಕ್ಕೆ ಸಂಬಂಧಿಸಿ 25 ವರ್ಷದ ಲಿಖಿತ್ ಗೌಡ ಎಂಬ ಯುವಕನನ್ನು ಮಾಜಿ ಪಂಚಾಯಿತಿ ಸದಸ್ಯ ರಮೇಶ್ ಗೌಡ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಆರೋಪಿ ರಮೇಶ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
ಬೆಂಗಳೂರು ಗ್ರಾಮಾಂತರ, ನವೆಂಬರ್ 27: ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಲೂರು ಗ್ರಾಮದಲ್ಲಿ ಆಶ್ರಯ ಮನೆ ಯೋಜನೆ ಭೂ ವಿವಾದಕ್ಕೆ ಸಂಬಂಧಿಸಿದಂತೆ 25 ವರ್ಷದ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ಯುವಕನನ್ನು ಲಿಖಿತ್ ಗೌಡ ಎಂದು ಗುರುತಿಸಲಾಗಿದೆ. ಈ ಘಟನೆ ಹೊಸಕೋಟೆ ಸಮೀಪದ ಸೋಲೂರಿನಲ್ಲಿ ನಡೆದಿದೆ.
ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಗೌಡ (50) ಎಂಬಾತ ಲಿಖಿತ್ ಗೌಡಗೆ ಡಬಲ್ ಬ್ಯಾರಲ್ ಗನ್ನಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆಶ್ರಯ ಮನೆ ಯೋಜನೆಗೆ ಮಂಜೂರಾಗಿದ್ದ ಭೂಮಿಯನ್ನು ರಮೇಶ್ ಗೌಡ ಒತ್ತುವರಿ ಮಾಡಿಕೊಂಡಿದ್ದ. ಈ ಭೂಮಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದಾಗ ಲಿಖಿತ್ ಗೌಡ ಮತ್ತು ರಮೇಶ್ ಗೌಡ ನಡುವೆ ಗಲಾಟೆ ಸಂಭವಿಸಿದೆ. ಈ ಗಲಾಟೆಯೇ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಲಿಖಿತ್ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಹೊಸಕೋಟೆ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ದಾವಿಸಿ, ಆರೋಪಿ ರಮೇಶ್ ಗೌಡನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
