Video: ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ

Updated on: Jan 09, 2026 | 7:10 AM

ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಶ್ರೀಕಾಕುಳಂ, ಜನವರಿ 09: ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

 

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 09, 2026 07:10 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More