ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ, ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

Edited By:

Updated on: Aug 24, 2025 | 4:26 PM

ಭಕ್ತರಿಗೆ ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ತೋರಿದ ಆರೋಪ ಹಿನ್ನೆಲೆಯಲ್ಲಿ ದೇವರಾಯನದುರ್ಗ ಅರ್ಚಕನ ಮೇಲೆ ಯುವಕರು ಹಲ್ಲೆ ಮಾಡಿರು ಘಟನೆ ನಡೆದಿದೆ. ತುಮಕೂರು ಹೊರವಲಯದಲ್ಲಿರುವ ದೇವರಾಯನದುರ್ಗ ದೇಗುಲದ ಅರ್ಚಕ ನಾಗಭೂಷಣಾಚಾರ್ಯಗೆ ಮಹಿಳೆಯರು, ಇಬ್ಬರು ಯುವಕರು ಸೇರಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮೂರ್ನಾಲ್ಕು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ತಡವಾಗ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತುಮಕೂರು, (ಆಗಸ್ಟ್ 24): ಭಕ್ತರಿಗೆ ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ತೋರಿದ ಆರೋಪ ಹಿನ್ನೆಲೆಯಲ್ಲಿ ದೇವರಾಯನದುರ್ಗ ಅರ್ಚಕನ ಮೇಲೆ ಯುವಕರು ಹಲ್ಲೆ ಮಾಡಿರು ಘಟನೆ ನಡೆದಿದೆ. ತುಮಕೂರು ಹೊರವಲಯದಲ್ಲಿರುವ ದೇವರಾಯನದುರ್ಗ ದೇಗುಲದ ಅರ್ಚಕ ನಾಗಭೂಷಣಾಚಾರ್ಯಗೆ ಮಹಿಳೆಯರು, ಇಬ್ಬರು ಯುವಕರು ಸೇರಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮೂರ್ನಾಲ್ಕು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ತಡವಾಗ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published on: Aug 24, 2025 04:25 PM
Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More