AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Apr 22, 2026 | 10:41 PM

Share

ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಯುವಕ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ. 

ಬಾಗಲಕೋಟೆ, (ಏಪ್ರಿಲ್ 22): ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಯುವಕ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ.

ಇಸ್ಪೀಟ್ ಆಡುತ್ತಿದ್ದ ಓರ್ವ ಆರೋಪಿ ರಕ್ಷಣೆಗೆ ಮುಂದಾಗಿದ್ದ ಪೊಲೀಸರು, ಬೈಕ್ ಬಿಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮುತ್ತಪ್ಪ ನಾಯ್ಕರ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರಿನ ಅನ್ವಯ ಲೋಕಾಯುಕ್ತ SP ಮಹಾಲಿಂಗ ನಂದಗಾಂವಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ಪಿಎಸ್​ಐ ಭೀಮಪ್ಪ, ಪಿಸಿ ಬಿರಾದಾರನನ್ನು 1.70 ಲಕ್ಷ ಲಂಚ ಸ್ವೀಕರಿಸುವಾಗ ಹಿಡಿದಿದ್ದರು. ಇದರ ಬೆನ್ನಲ್ಲೇ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ!

ಇನ್ಸ್​​ಪೆಕ್ಟರ್ ಭೀಮಪ್ಪ ತಮ್ಮ ವರ್ತನೆಯಿಂದ ಸಾರ್ವಜನಿಕರ ವಿರೋಧ ಕಟ್ಟಿಕೊಂಡಿದ್ದರು. ಅಲ್ಲದೇ ಪಿಎಸ್​​ಐ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು. ಇದೀಗ ಲೋಕಾಯುಕ್ತಕ್ಕೆ ಬಲೆಗೆ ಬೀಳುತ್ತಿದ್ದಂತೆಯೇ ಜನರು ಫುಲ್ ಖುಷ್ ಆಗಿದ್ದಾರೆ. ಇನ್ನು ಇನ್ಸ್​​ಪೆಕ್ಟರ್​ ಏನೆಲ್ಲಾ ಕೆಟ್ಟ ಕೆಲಸ ಮಾಡಿದ್ದಾರೆ ಎನ್ನುವುದನ್ನು ಸಾಕ್ಷಿ ನೀಡುತ್ತೇವೆ. ಹೀಗಾಗಿ ಎಸ್ಪಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಈ ಘಟನೆ ಅಚ್ಚರಿ ಮೂಡಿಸಿದೆ. ಯಾಕಂದ್ರೆ, ಓರ್ವ ಪಿಎಸ್​ಐ ಲೋಕಾಯುಕ್ತ ಬಲಿಗೆ ಬಿದ್ದಿದ್ದರಿಂದ ಈ ಪರಿ ಸಂಭ್ರಮಾರಣೆ ಮಾಡುತ್ತಿರುವುದು ಅಪರೂಪ. ಇದರ ಅರ್ಥ ಪಿಎಸ್​​ಐ ಕಾರ್ಯವೈಖರಿ ತೋರಿಸುತ್ತಿದೆ.

Published on: Apr 22, 2026 10:39 PM

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More