ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಹುಚ್ಚಾಟ; ಬೈಕ್ ಡಿವೈಡರ್ ಗೆ ಡಿಕ್ಕಿ
ಮೂವರು ಯುವಕರು ಬೈಕ್ನಲ್ಲಿ ಕುಳಿತುಕೊಂಡು ಪುಂಡಾಟ ಮೆರೆದಿದ್ದಾರೆ. ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿ(Bangalore-Salem National Highway)ಯಲ್ಲಿ ಬೈಕ್ನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಬೈಕ್ನಿಂದ ಯುವಕರು ಹಾರಿ ಕೆಳಗೆ ಬಿದ್ದಿದ್ದಾರೆ.
ಬೆಂಗಳೂರು, ಫೆ.15: ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿ(Bangalore-Salem National Highway)ಯಲ್ಲಿ ಯುವಕರ ಹುಚ್ಚಾಟ ಮೀತಿಮೀರಿದ್ದು, ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ ಮಾಡಿದ ಪರಿಣಾಮ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಒಂದೇ ಬೈಕ್ನಲ್ಲಿ ಮೂರು ಜನ ಯುವಕರು ಸವಾರಿ ಮಾಡುತ್ತಿದ್ದರು. ಅಷ್ಟೇ ಅಲ್ಲ, ಬೈಕ್ನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಬೈಕ್ನಿಂದ ಯುವಕರು ಹಾರಿ ಕೆಳಗೆ ಬಿದ್ದಿದ್ದಾರೆ. ಹೆದ್ದಾರಿಯಲ್ಲಿನ ಯುವಕರ ಪುಂಡಾಟ ಮೊಬೈಲ್ನಲ್ಲಿ ಸೆರೆಯಾಗಿದೆ. ಇತ್ತೀಚಿಗೆ ಹೆದ್ದಾರಿಯಲ್ಲಿ ಯುವಕರ ಪುಂಡಾಟ ಹೆಚ್ಚಾಗುತ್ತಿದ್ದು, ಇದಕ್ಕೆ ಪೊಲೀಸರು ಬ್ರೇಕ್ ಹಾಕಬೇಕಿದೆ. ಇಲ್ಲದಿದ್ದರೆ ಇತರ ವಾಹನ ಸವಾರರಿಗೂ ತೊಂದರೆ ಆಗಲಿದೆ. ಇನ್ನು ಗಾಯಗೊಂಡ ಯುವಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Feb 15, 2024 05:27 PM