ಡಿಸಿಪಿ ಕಚೇರಿ ಬಳಿ ವ್ಹೀಲಿಂಗ್ ಮಾಡಿ ಪುಂಡಾಟ; ಕಾರ್ ಡ್ಯಾಶ್ ಬೋರ್ಡ್ ಕ್ಯಾಮರಾದಲ್ಲಿ ವಿಡಿಯೋ ಸೆರೆ

| Updated By: ಆಯೇಷಾ ಬಾನು

Updated on: Dec 20, 2023 | 9:56 AM

ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಬಳಿಯ ಸೌತ್ ಎಂಡ್ ಸರ್ಕಲ್ ಬಳಿ ರಾತ್ರಿ 11ಗಂಟೆ ಸುಮಾರಿಗೆ ಮೂರು ನಾಲ್ಕು ಡಿಯೋ ಬೈಕ್​ಗಳಲ್ಲಿ ಯುವಕರು ವ್ಹೀಲಿಂಗ್ ಮಾಡಿ ಸವಾರರಿಗೆ ತೊಂದರೆ ಕೊಟ್ಟಿದ್ದಾರೆ. ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಬಾರದು ಎಂದು ನಂಬರ್ ಪ್ಲೇಟ್ ಇಲ್ಲದ ಬೈಕ್​ಗಳಲ್ಲಿ ವ್ಹೀಲಿಂಗ್ ಮಾಡಿದ್ದಾರೆ.

ಬೆಂಗಳೂರು, ಡಿ.20: ನಗರದ ಹಲವು ರಸ್ತೆಗಳಲ್ಲಿ ರಾತ್ರಿಯಾಗ್ತಿದ್ದಂತೆಯೇ ಕೆಲ ಯುವಕರ ತಂಡ ಆಕ್ಟೀವ್ ಆಗುತ್ತಿದೆ. ಡಿಸಿಪಿ ಕಚೇರಿ ಸಮೀಪದಲ್ಲೇ ಪುಂಡರು ವ್ಹೀಲಿಂಗ್ (Wheeling) ಮಾಡಿ ಪುಂಡಾಟ ಮೆರೆದಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಬಳಿಯ ಸೌತ್ ಎಂಡ್ ಸರ್ಕಲ್ ಬಳಿ ರಾತ್ರಿ 11ಗಂಟೆ ಸುಮಾರಿಗೆ ಮೂರು ನಾಲ್ಕು ಡಿಯೋ ಬೈಕ್​ಗಳಲ್ಲಿ ಯುವಕರು ವ್ಹೀಲಿಂಗ್ ಮಾಡಿ ಸವಾರರಿಗೆ ತೊಂದರೆ ಕೊಟ್ಟಿದ್ದಾರೆ. ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಬಾರದು ಎಂದು ನಂಬರ್ ಪ್ಲೇಟ್ ಇಲ್ಲದ ಬೈಕ್​ಗಳಲ್ಲಿ ವ್ಹೀಲಿಂಗ್ ಮಾಡಿದ್ದಾರೆ. ಅಜಾಗರೂಕತೆ ಚಾಲನೆ, ವ್ಹೀಲಿಂಗ್ ಮಾಡಿ ಬೇರೆ ಸವಾರರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ. ಸದ್ಯ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮರಾದಲ್ಲಿ ಯುವಕರ ಪುಂಡಾಟ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ