YS Sharmila in Bengaluru: ಡಿಕೆ ಶಿವಕುಮಾರ್​ರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ವೈಎಸ್ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈಎಸ್ ಶರ್ಮಿಳಾ

YS Sharmila in Bengaluru: ಡಿಕೆ ಶಿವಕುಮಾರ್​ರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ವೈಎಸ್ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈಎಸ್ ಶರ್ಮಿಳಾ

ಅರುಣ್​ ಕುಮಾರ್​ ಬೆಳ್ಳಿ
|

Updated on: May 29, 2023 | 11:43 AM

ವೈಎಸ್ ಆರ್ ತೆಲಂಗಾಂಣ ಪಕ್ಷದ ಮುಖ್ಯಸ್ಥೆಯಾಗಿರುವ ಶರ್ಮಿಳಾ, ತೆಲಂಗಾಂಣದ ಮುಖ್ಯಮಂತ್ರಿಗೆ ಕಾಂಗ್ರೆಸ್ ಮತ್ತು ಬಿಜೆಪಿಗಿಂತ ದೊಡ್ಡ ಥ್ರೆಟ್ ಅನಿಸಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಿವಾಸಕ್ಕೆ ಇಂದು ವಿಶೇಷ ಅತಿಥಿಯೊಬ್ಬರು ಆಗಮಿಸಿದರು. ಸಂಯುಕ್ತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ, ಈಗಿನ ಆಂಧ್ರ ಪ್ರದೇಶದ ವೈಎಸ್ ಜಗನ್ಮೋಹನ್ ರೆಡ್ಡಿ (YS Jaganmohan Reddy) ಸಹೋದರಿ ಮತ್ತು ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ (K Chandrashekar) ಅವರಿಗೆ ಪರ್ಯಾಯ ಶಕ್ತಿಯಾಗಿ ಬೆಳೆಯುತ್ತಿರುವ ವೈಎಸ್ ಶರ್ಮಿಳಾ (YS Sharmila) ಶಿವಕುಮಾರ್ ರನ್ನು ಭೇಟಿಯಾಗಿ ಶುಭ ಹಾರೈಸಿದರು. ವೈಎಸ್ ಆರ್ ತೆಲಂಗಾಂಣ ಪಕ್ಷದ ಮುಖ್ಯಸ್ಥೆಯಾಗಿರುವ ಶರ್ಮಿಳಾ, ತೆಲಂಗಾಂಣದ ಮುಖ್ಯಮಂತ್ರಿಗೆ ಕಾಂಗ್ರೆಸ್ ಮತ್ತು ಬಿಜೆಪಿಗಿಂತ ದೊಡ್ಡ ಥ್ರೆಟ್ ಅನಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ