ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್

Updated on: Apr 18, 2025 | 11:01 PM

‘ಯುದ್ಧಕಾಂಡ’ ಸಿನಿಮಾಗೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದೆ. ಈ ಚಿತ್ರಕ್ಕೆ ಅಜಯ್ ರಾವ್ ಅವರು ಬಂಡವಾಳ ಹೂಡಿದ್ದಾರೆ. ಅಲ್ಲದೇ, ಮುಖ್ಯ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಅಜಯ್ ರಾವ್ ಕಾರು ಮಾರುವಾಗ ಅವರ ಪುತ್ರಿ ಕಣ್ಣೀರು ಹಾಕಿದ್ದ ವಿಡಿಯೋ ವೈರಲ್ ಆಗಿದೆ. ಆ ಬಗ್ಗೆ ಅಜಯ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಏಪ್ರಿಲ್ 18ರಂದು ಬಿಡುಗಡೆ ಆದ ‘ಯುದ್ಧಕಾಂಡ’ (Yuddhakaanda) ಚಿತ್ರಕ್ಕೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದೆ. ಈ ಸಿನಿಮಾಗೆ ಅಜಯ್ ರಾವ್ (Ajay Rao) ಅವರೇ ಬಂಡವಾಳ ಹೂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಕೂಡ ಅವರು ಅಭಿನಯಿಸಿದ್ದಾರೆ. ಸಿನಿಮಾಗಾಗಿ ಅಜಯ್ ರಾವ್ ಕಾರು ಮಾರುವಾಗ ಅವರ ಮಗಳು (Ajay Rao Daughter) ಕಣ್ಣೀರು ಹಾಕಿದ್ದ ವಿಡಿಯೋ ವೈರಲ್ ಆಗಿದೆ. ಆ ಕುರಿತು ಅಜಯ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ರೀತಿ ಪ್ರಚಾರ ನನಗೆ ಬೇಡ. ಸೆಂಟಿಮೆಂಟ್​ನಿಂದ ನಮ್ಮ ಸಿನಿಮಾ ಗೆಲ್ತು ಎಂಬ ಮಾತು ಬರುವುದು ಬೇಡ. ಅದು ನನಗೆ ಬೇಡ’ ಎಂದು ಅಜಯ್ ರಾವ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More