Delhi; ಧರ್ಮ ಮತ್ತು ರಾಜಕೀಯದ ಜೊತೆ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಯಾವುದೇ ಸಂಬಂಧ ಹೊಂದಿಲ್ಲ: ಹೆಚ್ ಸಿ ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ
ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರ ಮತ್ತು ಆಧಾರರಹಿತ ಎಂದು ಸಚಿವ ಹೇಳಿದರು.
ದೆಹಲಿ: ಟಿ ನರಸೀಪುರ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಖಂಡನೀಯ ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಹೆಚ್ ಸಿ ಮಹದೇವಪ್ಪ (HC Mahadevappa) ಹೇಳಿದರು. ಸಾಮಾಜಿಕ ಸಬಲೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಕರೆದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಸಚಿವರು, ವೇಣುಗೋಪಾಲ ಕೊಲೆ (Venugopal murder) ಪ್ರಕರಣದಲ್ಲಿ ಸರ್ಕಾರ ಈಗಾಗಲೇ ತನಿಖೆಗೆ ಆದಶಿಸಿದೆ ಮತ್ತು ರಾಜಕೀಯ ಹಾಗೂ ಧರ್ಮದ ಜೊತೆ ಈ ಪ್ರಕರಣ ಯಾವುದೇ ರೀತಿಯ ಸಂಬಂಧ ಹೊಂದಿಲ್ಲ ಎಂದು ಮಹದೇವಪ್ಪ ಹೇಳಿದರು. ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಮಾಡಿರುವ ಆರೋಪಗಳು ಸತ್ಯಕ್ಕೆ ದೂರ ಮತ್ತು ಆಧಾರರಹಿತ ಎಂದು ಸಚಿವ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ