ಯುವ ಎಂಟ್ರಿಗೆ ಭರ್ಜರಿ ಸಿದ್ಧತೆ; ಥಿಯೇಟರ್ ಎದುರು ನಿಂತಿದೆ ಕಟೌಟ್

ಯುವ ಎಂಟ್ರಿಗೆ ಭರ್ಜರಿ ಸಿದ್ಧತೆ; ಥಿಯೇಟರ್ ಎದುರು ನಿಂತಿದೆ ಕಟೌಟ್

ರಾಜೇಶ್ ದುಗ್ಗುಮನೆ
|

Updated on: Mar 29, 2024 | 8:35 AM

ಯುವ ರಾಜ್​ಕುಮಾರ್ ನಾಯಕ ನಟನಾಗಿ ಅಭಿನಯಿಸಿರುವ ‘ಯುವ’ ಸಿನಿಮಾ ಇಂದು (ಮಾರ್ಚ್ 29) ವಿಶ್ವಾದ್ಯಂತ ರಿಲೀಸ್ ಆಗಿದೆ. ಬೆಂಗಳೂರಿನ ಸಿದ್ದೇಶ್ವರ ಥಿಯೇಟರ್​ನಲ್ಲಿ ಮುಂಜಾನೆಯಿಂದಲೇ ಫ್ಯಾನ್ಸ್​ ಶೋ ಪ್ರದರ್ಶನ ಕಂಡಿದೆ. ರಾಜ್ಯದಲ್ಲಿ 250 ಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಈ ಚಿತ್ರ ಬಿಡುಗಡೆ ಆಗಿದೆ

ಯುವ ರಾಜ್​ಕುಮಾರ್ (Yuva Rajkumar) ನಾಯಕ ನಟನಾಗಿ ಅಭಿನಯಿಸಿರುವ ‘ಯುವ’ ಸಿನಿಮಾ ಇಂದು (ಮಾರ್ಚ್ 29) ವಿಶ್ವಾದ್ಯಂತ ರಿಲೀಸ್ ಆಗಿದೆ. ಬೆಂಗಳೂರಿನ ಸಿದ್ದೇಶ್ವರ ಥಿಯೇಟರ್​ನಲ್ಲಿ ಮುಂಜಾನೆಯಿಂದಲೇ ಫ್ಯಾನ್ಸ್​ ಶೋ ಪ್ರದರ್ಶನ ಕಂಡಿದೆ. ರಾಜ್ಯದಲ್ಲಿ 250 ಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಈ ಚಿತ್ರ ಬಿಡುಗಡೆ ಆಗಿದೆ ಅನ್ನೋದು ವಿಶೇಷ. ಜೆಪಿ ನಗರದ ಸಿದ್ದೇಶ್ವರ ಥಿಯೇಟರ್ ಎದುರು ಯುವ ಅವರ ಕಟೌಟ್​ಗಳನ್ನು ಹಾಕಲಾಗಿದೆ. ಮುಂಜಾನೆಯ ಶೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ‘ಯುವ’ ಚಿತ್ರಕ್ಕೆ ಸಂತೋಷ್ ಆನಂದ್​ರಾಮ್ ನಿರ್ದೇಶನ ಮಾಡಿದ್ದಾರೆ. ಯುವ ಜೊತೆ ಸಪ್ತಮಿ ಗೌಡ ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಯುವನ ಲಾಂಚ್ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ