ಯುವನಿಧಿ ಗ್ಯಾರಂಟಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಯುವಕರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆ

ಯುವನಿಧಿ ಗ್ಯಾರಂಟಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಯುವಕರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆ

ಅರುಣ್​ ಕುಮಾರ್​ ಬೆಳ್ಳಿ
|

Updated on:Jan 12, 2024 | 12:00 PM

ಡಾ ಶರಣಪ್ರಕಾಶ್ ಪಾಟೀಲ್ ಅವರು ನೀಡಿರುವ ಮಾಹಿತಿಯ ಪ್ರಕಾರ ಇದುವರೆಗೆ 66,000 ಯುವ ಪದವೀಧರರು ಮತ್ತು ಡಿಪ್ಲೋಮಾ ಮಾಡಿದವರು ಯುವನಿಧಿ ಯೋಜನೆ ಅಡಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಕಾರ್ಯ ಡಿಸೆಂಬರ್ 26ರಂದು ಆರಂಭಿಸಲಾಗಿದ್ದು ಇದು ನಿರಂತರ ಪ್ರಕ್ರಿಯೆಯಾಗಿರುವುದರಿಂದ ಅರ್ಹ ನೋಂದಣಿದಾರರ ಸಂಖ್ಯೆ ಹೆಚ್ಚಲಿದೆ.

ಶಿವಮೊಗ್ಗ: ಸಿದ್ದರಾಮಯ್ಯ ಸರ್ಕಾರದ 5ನೇ ಗ್ಯಾರಂಟಿಗೆ (5th Guarantee) ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ದೊರೆಯಲಿದ್ದು ಎಲ್ಲ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ತಮ್ಮ ಸರ್ಕಾರ ಆಧಿಕಾರಕ್ಕೆ ಬಂದು 9 ತಿಂಗಳು ನಂತರ 5 ನೇ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದು ಯುವಕರ ಕಾರ್ಯಕ್ರಮ ಆಗಿರುವುದರಿಂದ ಸುಮಾರು ಒಂದು ಲಕ್ಷ ಯುವಕರು ಪಾಲ್ಗೊಳ್ಳಲಿದ್ದಾರೆ ಎಂದು ಈ ಯೋಜನೆ ಜಾರಿಗೊಳಿಸಲು ಬಹಳಷ್ಟು ಶ್ರಮಿಸಿದ್ದಾರೆ ಎನ್ನಲಾಗುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಯುವಕರು ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆಲ್ಲ ಬೆಳಗಿನ ತಿಂಡಿ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗಿನ ತಿಂಡಿ ತಯಾರಾಗಿರುವುದನ್ನು ಚಿತ್ರದಲ್ಲಿ ನೋಡಬಹುದು. ಪುಲಾವ್, ಮೊಸರನ್ನ ಮತ್ತು ಮೆಣಸಿನಕಾಯಿ ಬಜ್ಜಿಯನ್ನು ತಟ್ಟೆಗಳಲ್ಲಿ ಬಡಿಸಿ ಸಜ್ಜು ಮಾಡಿಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 12, 2024 10:51 AM