Yuva Rajkumar Birthday: ಯುವ ರಾಜ್​ಕುಮಾರ್ ಹುಟ್ಟುಹಬ್ಬದ ಸಂಭ್ರಮ ಹೀಗಿತ್ತು

Updated on: Apr 23, 2023 | 10:36 PM

Yuva Rajkumar: ನಟ ಯುವ ರಾಜ್​ಕುಮಾರ್ ಇಂದು 30ನೇ ಹುಟ್ಟುಹಬ್ಬ ಆಚರಿಸಿಕೊಂಡು, ಅವರ ಹುಟ್ಟುಹಬ್ಬ ಸಂಭ್ರಮದ ವಿಡಿಯೋ ಇಲ್ಲಿದೆ.

ಯುವ ರಾಜ್​ಕುಮಾರ್ (Yuva Rajkumar) 30ನೇ ಹುಟ್ಟುಹಬ್ಬವನ್ನು ಇಂದು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಂಡರು. ಮೊದಲ ಸಿನಿಮಾದ ಚಿತ್ರೀಕರಣ ಇನ್ನೂ ನಡೆಯುತ್ತಿರುವಾಗಲೇ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ಯುವ ರಾಜ್​ಕುಮಾರ್ ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಅವರೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಯುವ ರಾಜ್​ಕುಮಾರ್ ತಂದೆ ರಾಘವೇಂದ್ರ ರಾಜ್​ಕುಮಾರ್ ಮತ್ತು ತಾಯಿ ಸಹ ಹಾಜರಿದ್ದರು. ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಮಗನಿಗೆ ಅಪ್ಪ ರಾಘವೇಂದ್ರ ರಾಜ್​ಕುಮಾರ್ ಸಿಹಿ ಮುತ್ತೊಂದನ್ನು ನೀಡಿದ್ದು ಗಮನ ಸೆಳೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More