‘ಬ್ಯಾಂಗಲ್ ಬಂಗಾರಿ ಹಾಡು ಸಿಎಂ ತನಕ ತಲುಪಿದೆ’: ಯುವ ರಾಜ್​ಕುಮಾರ್

Updated on: Jul 15, 2025 | 10:49 PM

ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’ ಚಿತ್ರ ರಿಲೀಸ್​ಗೆ ಸಜ್ಜಾಗಿದೆ. ಈ ಸಿನಿಮಾದ ‘ಬ್ಯಾಂಗಲ್ ಬಂಗಾರಿ’ ಸಾಂಗ್ ಸೂಪರ್ ಹಿಟ್ ಆಗಿದೆ. ಚರಣ್ ರಾಜ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ‘ಎಕ್ಕ’ ಸಿನಿಮಾದ ತಂಡದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು.

ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’ ಸಿನಿಮಾ (Ekka Movie) ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ‘ಬ್ಯಾಂಗಲ್ ಬಂಗಾರಿ’ (Bangle Bangari) ಹಾಡು ಸೂಪರ್ ಹಿಟ್ ಆಗಿದೆ. ಚರಣ್ ರಾಜ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಇತ್ತೀಚೆಗೆ ‘ಎಕ್ಕ’ ಚಿತ್ರತಂಡದವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಆ ಬಗ್ಗೆ ಟಿವಿ9 ಸಂದರ್ಶನದಲ್ಲಿ ಯುವ ರಾಜ್​​ಕುಮಾರ್ ಅವರು ಮಾತನಾಡಿದ್ದಾರೆ. ‘ಮುಖ್ಯಮಂತ್ರಿಗಳ ತನಕ ಸಾಂಗ್ ತಲುಪಿದೆ. ಅವರ ತಂಡದವರು ಅವರಿಗೆ ಹಾಡು ತೋರಿಸಿದ್ದಾರೆ ಅನಿಸುತ್ತದೆ. ಅವರು ನಮಗೆ ತಂಡಕ್ಕೆ ಶುಭ ಕೋರಿದ್ದು ತುಂಬಾ ಖುಷಿ ಆಯಿತು’ ಎಂದು ಯುವ ರಾಜ್​ಕುಮಾರ್ (Yuva Rajkumar) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More