AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 Hat-trick: ಈ ಸೀಸನ್​ನ ಮೊದಲ ಹ್ಯಾಟ್ರಿಕ್ ವಿಕೆಟ್ ಪಡೆದ ಚದುರಂಗಿ ಚಾಹಲ್; ವಿಡಿಯೋ

IPL 2025 Hat-trick: ಈ ಸೀಸನ್​ನ ಮೊದಲ ಹ್ಯಾಟ್ರಿಕ್ ವಿಕೆಟ್ ಪಡೆದ ಚದುರಂಗಿ ಚಾಹಲ್; ವಿಡಿಯೋ

ಪೃಥ್ವಿಶಂಕರ
|

Updated on: Apr 30, 2025 | 9:49 PM

Yuzvendra Chahal's IPL 2025 Hat-trick: ಪಂಜಾಬ್ ಕಿಂಗ್ಸ್ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರು ಐಪಿಎಲ್ 2025ರಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 19ನೇ ಓವರ್‌ನಲ್ಲಿ 4 ವಿಕೆಟ್‌ಗಳನ್ನು ಪಡೆದು ಈ ಸಾಧನೆ ಮಾಡಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಇತಿಹಾಸ ನಿರ್ಮಿಸಿದ್ದಾರೆ. ಐಪಿಎಲ್ 2025 ರ 49 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚಾಹಲ್ ಅದ್ಭುತ ಬೌಲಿಂಗ್ ಮಾಡಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಇದರೊಂದಿಗೆ, ಚಾಹಲ್ ಐಪಿಎಲ್ 2025 ರಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬುಧವಾರ, ಏಪ್ರಿಲ್ 30 ರಂದು ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಮೊದಲು ಬೌಲಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಪರ 19 ನೇ ಓವರ್‌ನಲ್ಲಿ ಚಾಹಲ್ ಈ ಅದ್ಭುತ ಸಾಧನೆ ಮಾಡಿದರು. ಈ ಓವರ್‌ನಲ್ಲಿ ಚಾಹಲ್ ಒಟ್ಟು 4 ವಿಕೆಟ್‌ಗಳನ್ನು ಕಬಳಿಸಿದರು, ಇದರಲ್ಲಿ ಎಂಎಸ್ ಧೋನಿ ಮತ್ತು ಹ್ಯಾಟ್ರಿಕ್ ವಿಕೆಟ್ ಕೂಡ ಸೇರಿದ್ದವು.