AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ

W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ

ಝಾಹಿರ್ ಯೂಸುಫ್
|

Updated on: Jul 31, 2025 | 11:54 AM

Share

Yuzvendra Chahal: ಕೌಂಟಿ ಕ್ರಿಕೆಟ್​ನ 41ನೇ ಪಂದ್ಯದಲ್ಲಿ ಉತ್ತಮ ಸ್ಪಿನ್ ದಾಳಿ ಸಂಘಟಿಸಿದ ಯುಜ್ವೇಂದ್ರ ಚಹಲ್ 33.2 ಓವರ್​ಗಳಲ್ಲಿ 118 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ. ಇತ್ತ ಚಹಲ್ ಸ್ಪಿನ್ ಮೋಡಿಗೆ ತತ್ತರಿಸಿದ ಡರ್ಬಿಶೈರ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 377 ರನ್​ಗಳಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ನಾರ್ಥಾಂಪ್ಟನ್‌ಶೈರ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 265 ರನ್​ಗಳಿಸಿದೆ.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್ ಡಿವಿಷನ್-2 ಟೂರ್ನಿಯ 41ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ನಾರ್ಥಂಪ್ಟನ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ನಾರ್ಥಾಂಪ್ಟನ್‌ಶೈರ್ ಮತ್ತು ಡರ್ಬಿಶೈರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡರ್ಬಿಶೈರ್ ತಂಡದಕ್ಕೆ ಮೊದಲ ಇನಿಂಗ್ಸ್​​ನಲ್ಲಿ ಆಘಾತ ನೀಡುವಲ್ಲಿ ಚಹಲ್ ಯಶಸ್ವಿಯಾಗಿದ್ದಾರೆ.

ನಾರ್ಥಾಂಪ್ಟನ್‌ಶೈರ್ ಪರ ಅತ್ಯುತ್ತಮ ಸ್ಪಿನ್ ದಾಳಿ ಸಂಘಟಿಸಿದ ಯುಜ್ವೇಂದ್ರ ಚಹಲ್ 33.2 ಓವರ್​ಗಳಲ್ಲಿ 118 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ. ಇತ್ತ ಚಹಲ್ ಸ್ಪಿನ್ ಮೋಡಿಗೆ ತತ್ತರಿಸಿದ ಡರ್ಬಿಶೈರ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 377 ರನ್​ಗಳಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ನಾರ್ಥಾಂಪ್ಟನ್‌ಶೈರ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 265 ರನ್​ಗಳಿಸಿದೆ.