IND vs NZ, Semi Final: ಭಾರತದ ಡ್ರೆಸ್ಸಿಂಗ್ ರೂಮ್​ಗೆ ದಿಢೀರ್ ಎಂಟ್ರಿ ಕೊಟ್ಟ ಯುಜ್ವೇಂದ್ರ ಚಹಲ್: ವಿಡಿಯೋ

Yuzvendra Chahal in Indian Dressing Room: ವಿಶ್ವಕಪ್ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯ ಮುಗಿದ ಬಳಿಕ ಭಾರತದ ಡ್ರೆಸ್ಸಿಂಗ್ ರೂಮ್​ಗೆ ದಿಢೀರ್ ಆಗಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಭೇಟಿ ಕೊಟ್ಟಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದ ಚಹಲ್ ತನ್ನ ಸಹ ಆಟಗಾರರನ್ನು ತಬ್ಬಿಕೊಂಡು ಶುಭಕೋರಿದರು.

IND vs NZ, Semi Final: ಭಾರತದ ಡ್ರೆಸ್ಸಿಂಗ್ ರೂಮ್​ಗೆ ದಿಢೀರ್ ಎಂಟ್ರಿ ಕೊಟ್ಟ ಯುಜ್ವೇಂದ್ರ ಚಹಲ್: ವಿಡಿಯೋ
|

Updated on:Nov 16, 2023 | 2:22 PM

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ (Team India) ಫೈನಲ್​ಗೆ ಲಗ್ಗೆಯಿಟ್ಟಿದೆ. ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 70 ರನ್​ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿತು. ಭಾರತ ಗೆದ್ದ ಬಳಿಕ ಡ್ರೆಸ್ಸಿಂಗ್ ರೂಮ್​ನ ವಾತಾವರಣದ ವಿಡಿಯೋವನ್ನು ಬಿಸಿಸಿಐ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ಇದರಲ್ಲಿ ಭಾರತದ ಆಟಗಾರರು ಕೋಚಿಂಗ್ ಸಿಬ್ಬಂದಿಯನ್ನು ಅಪ್ಪಿಕೊಂಡು ಸಂತೋಷ ವ್ಯಕ್ತಪಡಿಸುವುದನ್ನು ಕಾಣಬಹುದು. ಸ್ವಲ್ಪ ಸಮಯದ ನಂತರ, ಡ್ರೆಸ್ಸಿಂಗ್ ರೂಮ್​ಗೆ ದಿಢೀರ್ ಆಗಿ ಭಾರತದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಭೇಟಿ ಕೊಟ್ಟಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದ ಚಹಲ್ ತನ್ನ ಸಹ ಆಟಗಾರರನ್ನು ತಬ್ಬಿಕೊಂಡು ಶುಭಕೋರಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Thu, 16 November 23

Follow us